
ಮಹಾಲಿಂಗಪುರ: ‘ಕರ್ನಾಟಕದಲ್ಲಿ ಕೇಂದ್ರ ಸರ್ಕಾರದಿಂದ ಧನಸಹಾಯ ಪಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ಸಹಾಯವನ್ನು ಒದಗಿಸುತ್ತದೆ’ ಎಂದು ಜಿಲ್ಲಾ ಆಸ್ಪತ್ರೆಯ ಸಖಿ ಒನ್ ಸ್ಟಾಪ್ ಕೇಂದ್ರದ ಆಡಳಿತಾಧಿಕಾರಿ ಶಂಕ್ರಮ್ಮ ಜುಮ್ಮನಕಟ್ಟಿ ಹೇಳಿದರು.
ಸಮೀಪದ ರನ್ನಬೆಳಗಲಿಯ ಸಿದ್ಧಾರೂಢ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯ ಸಖಿ ಒನ್ ಸ್ಟಾಪ್ ಕೇಂದ್ರದಿಂದ ಬುಧವಾರ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಿಂಸಾಚಾರವನ್ನು ಅನುಭವಿಸಿದ ಅಥವಾ ಎದುರಿಸುತ್ತಿರುವ ಮಹಿಳೆಯರಿಗೆ ಸಮಗ್ರ ಬೆಂಬಲವನ್ನು ಒದಗಿಸುವುದು ಸಖಿ ಕೇಂದ್ರಗಳ ಪ್ರಾಥಮಿಕ ಉದ್ದೇಶವಾಗಿದೆ’ ಎಂದರು.
ಪ್ರಭಾರ ಮುಖ್ಯಶಿಕ್ಷಕಿ ಎಸ್.ಎಸ್.ಉದಪುಡಿ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಸಲಹೆಗಾರ್ತಿ ಸೀಮಾ ಇದ್ದಲಗಿ, ರೇಖಾ ನರಹಟ್ಟಿ, ಎಂ.ಬಿ.ಮುರಗೋಡ, ಪಿ.ಕೆ.ಪವಾರ, ವಿ.ಎಂ.ಹೊಸೂರ, ಎಲ್.ವೈ.ಶಾಸ್ತ್ರಿ, ಎಲ್.ಕೆ.ಮಂಟೂರ, ಎಸ್.ಎಂ.ಮೇಘಾಡಿ, ಸುಜಾತ ಬಿಸ್ಟನ್ನವರ, ಶ್ರೀಶೈಲ ಕಾಡದೇವರ, ಕಿರಣ ಪವಾರ, ರವಿ ಹಿರೇಕಲ್ಮಠ, ಬಾಲಕೃಷ್ಣ ಚೋಪಡೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.