ಜಮಖಂಡಿ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜುಲೈ 25 ರಂದು ನಿರುದ್ಯೋಗಿ ಯುವಕ, ಯುವತಿಯರು ಮತ್ತು ಅಂಗವಿಕಲರಿಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿ ಎಂದು ಸಮರ್ಥನಂ ಅಂಗವಿಕಲರ ಸಂಸ್ಥೆಯ ಅರುಣಕುಮಾರ ಎಮ್.ಜಿ. ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಾದ್ಯಂತ 27 ವರ್ಷಗಳಿಂದ ನಮ್ಮ ಸಂಸ್ಥೆ ಅಂಧರು, ಅಂಗವಿಕಲರು ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಸ್ನಾತಕೊತ್ತರ ಅಧ್ಯಯನ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಂಗವಿಕಲರು, ವಾಕ್ ಮತ್ತು ಶ್ರವಣ ದೋಷವುಳ್ಳವರು, ಅರೆ ಅಂಧತ್ವ ಹೊಂದಿರುವವರು ಹಾಗೂ ಸಾಮಾನ್ಯ ಅಭ್ಯರ್ಥಿಗಳು ಉದ್ಯೋಗಗಳನ್ನು ಪಡೆಯಲು ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕು. ಮೇಳದಲ್ಲಿ 45ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳಲಿವೆ ಎಂದರು.
ಹೆಚ್ಚಿನ ಮಾಹಿತಿಗಾಗಿ ಮೊ.9480809598, 9148157888 ಸಂಪರ್ಕಿಸಲು ತಿಳಿಸಿದ್ದಾರೆ.
ಪಂಡಿತ ಬಿ, ದೀಪಾ ಈ.ಪಿ, ಮಂಜು ಗೋವಿಂದಪ್ಪಗೋಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.