
ಬಾಗಲಕೋಟೆ: ಶಿಕ್ಷಣದ ಮಹತ್ವ ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಬೇಕು ಎಂಬುದು ಸಂತ ಸೇವಾಲಾಲರ ಆಶಯವಾಗಿತ್ತು. ಸ್ವಾಭಿಮಾನದ ಬದುಕು ಸಾಗಿಸಲು ಶಿಕ್ಷಣವೇ ಮಾರ್ಗ ಎಂದಿದ್ದರು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ಶಿವಾನಂದ ಜಿನ್‌ನಲ್ಲಿರುವ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು. ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವ ಹೊಂದಿರಬೇಕು ಎಂದಿದ್ದರು.
ಡಾ.ಎಂ.ಎಸ್. ದಡ್ಡೆನವರ, ನಗರಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಬಸವರಾಜ ಯಂಕಂಚಿ, ಶಿವಾನಂದ ಟವಳಿ, ಸತ್ಯನಾರಾಯಣ ಹೇಮಾದ್ರಿ, ಗುಂಡುರಾವ್ ಶಿಂದೆ, ಅಂಭಾಜಿ ಜೋಷಿ, ಶಿವಾನಂದ ರಾಠೋಡ, ದೀಲಿಪ್ ರಾಠೋಡ, ಗಂಗಾರಾಮ ಚವ್ಹಾಣ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.