ADVERTISEMENT

ಬೀಳಗಿ| ಶಾಲೆಗಳ ಉನ್ನತಿಗೆ ಪೋಷಕರ ಸಹಕಾರ ಅವಶ್ಯ: ಕ್ಷೇತ್ರ ಶಿಕ್ಷಣಾಧಿಕಾರಿ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 4:44 IST
Last Updated 15 ನವೆಂಬರ್ 2025, 4:44 IST
ಬೀಳಗಿ ಜಿಜಿಎಸ್ಎಚ್ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಪೋಷಕರ– ಶಿಕ್ಷಕರ ಮಹಾಸಭೆಯನ್ನು ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಸ್. ಆದಾಪುರ ಉದ್ಘಾಟಿಸಿದರು
ಬೀಳಗಿ ಜಿಜಿಎಸ್ಎಚ್ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಪೋಷಕರ– ಶಿಕ್ಷಕರ ಮಹಾಸಭೆಯನ್ನು ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಸ್. ಆದಾಪುರ ಉದ್ಘಾಟಿಸಿದರು   

ಬೀಳಗಿ: ‘ಪೋಷಕರ ವಿಶ್ವಾಸ ಹಾಗೂ ಸಹಕಾರ ಸರ್ಕಾರಿ ಶಾಲೆಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯುತ್ತದೆ. ಹೀಗಾಗಿ ಸಮುದಾಯದ ಸಹಭಾಗಿತ್ವದೊಂದಿಗೆ ಪೋಷಕರು– ಶಿಕ್ಷಕರ ಮಹಾಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಆದಾಪೂರ ಹೇಳಿದರು.

ಸ್ಥಳೀಯ ಜಿಜಿಎಸ್ಎಚ್ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಪೋಷಕರು– ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ವಿತರಣೆ, ಉಚಿತ ಆರೋಗ್ಯ ತಪಾಸಣೆ ಜತೆಗೆ ಪೂರಕ ಪೌಷ್ಟಿಕ ಆಹಾರ ವಿತರಣೆ ಎಲ್ಲವೂ ಇಲಾಖೆಯ ನಿಯಮಾನುಸಾರ ಉಚಿತವಾಗಿ ವಿತರಿಸಲಾಗುತ್ತಿದೆ. ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು’ ಎಂದರು.

ADVERTISEMENT

ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ ಮಾತನಾಡಿ, ‘ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶಿಕ್ಷಣ ಪ್ರಕ್ರಿಯೆಯಲ್ಲಿ ತೊಡಗಿಸಿ ಸರ್ಕಾರಿ ಶಾಲೆಗಳ ಬಗ್ಗೆ ಭರವಸೆ ಮೂಡಿಸಲಾಯಿತು. ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೆ, ಪೋಷಕರಿಂದ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆಯುವುದನ್ನು ಈ ಕಾರ್ಯಕ್ರಮ ಒಳಗೊಂಡಿದೆ. ಮಕ್ಕಳ ಪ್ರಗತಿ, ಹಾಜರಾತಿ, ಪರೀಕ್ಷೆ ಸಿದ್ಧತೆ, ವಿವಿಧ ಕಾಯ್ದೆಗಳ ಬಗ್ಗೆ ಮಾಹಿತಿಯನ್ನು ಪೋಷಕರ ಜೊತೆ ಹಂಚಿಕೊಳ್ಳಲಾಯಿತು. ರಾಜ್ಯದಾದ್ಯಂತ ಈ ಕಾರ್ಯಕ್ರಮ ನಡೆಯಲಿದೆ’ ಎಂದು ತಿಳಿಸಿದರು.

ಕ್ಷೇತ್ರ ಸಂಯೋಜಕ ಜಗದೀಶ ಖೋತ, ಬಿ.ಆರ್.ಪಿ ಸೋಮಶೇಖರ ತಳೆವಾಡ, ವೈದ್ಯೆ ಪಾರ್ವತಿ ಚಟ್ಟೆರ, ವಿಜಯಲಕ್ಷ್ಮಿ ಕುರ್ತಕೋಟಿ, ಎಸ್‌ಡಿಎಂಸಿ ಅಧ್ಯಕ್ಷೆ ಶಿವಗಂಗಾ ಪಾಟೀಲ, ಆರ್.ಎಸ್.ಬಾದವಾಡಗಿ, ಮುಖ್ಯ ಶಿಕ್ಷಕ ಎಸ್.ಎಸ್.ಗೋಕಾವಿ, ವಿ.ಆರ್.ಹಿರೇನಿಂಗಪ್ಪನವರ, ದೈಹಿಕ ಶಿಕ್ಷಣ ಶಿಕ್ಷಕ ಬೆಳ್ಳಿಕಟ್ಟಿ ಇದ್ದರು.

ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯೇ ನಮ್ಮೆಲ್ಲರ ಗುರಿಯಾಗಿದೆ. ಪಾಲಕರ ಸಹಭಾಗಿತ್ವ ಸರ್ಕಾರಿ ಶಾಲೆಗಳ ಬೆಳೆವಣಿಗೆಗೆ ಸ್ಫೂರ್ತಿದಾಯಕ
ಆರ್.ಎಸ್.ಆದಾಪೂರ ಬಿಇಒ ಬೀಳಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.