ಲೋಕಾಪುರ: ಸಮೀಪದ ಜಾಡರ ಅರಳಿಕಟ್ಟಿ ವ್ಯಾಪ್ತಿಯ ಕಾಡರಕೊಪ್ಪ ರಸ್ತೆಯಲ್ಲಿ ಬುಧವಾರ ಖಾಸಗಿ ಶಾಲಾ ವಾಹನ ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ರಾಯಲ್ ಪ್ಯಾಲೇಸ್ ಶಾಲೆಯ ವಾಹನದಲ್ಲಿ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಮುಧೋಳ ತಹಶೀಲ್ದಾರ್ ಮಹಾದೇವ ಸಣಮುರಿ ಅವರು
ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಸಣ್ಣ ಪುಟ್ಟ ಗಾಯಗಳಾಗಿದ್ದ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಮನೆಗೆ ಮರಳಿದರು. ಮೂವರು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ವಿದ್ಯಾರ್ಥಿಗಳನ್ನು
ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪಾಲಕರು ಅಪಾರ ಪ್ರಮಾಣದಲ್ಲಿ ಆರೋಗ್ಯ ಕೇಂದ್ರದತ್ತ ದಾವಿಸಿದರು. ವಾಹನ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲು ಕುರಿತು ಮಾಹಿತಿ ಪಡೆಯಲು ಪಿಎಸ್‌ಐ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿದರೂ, ಅವರು ಕರೆ ಸ್ವೀಕರಿಸಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.