ADVERTISEMENT

ಕುರಿ, ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಅಹ್ವಾನ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 5:58 IST
Last Updated 28 ಫೆಬ್ರುವರಿ 2026, 5:58 IST
   

ಬಾಗಲಕೋಟೆ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ವಿಶೇಷ ಘಟಕ ಯೋಜನೆಯಡಿ ಜಿಲ್ಲೆಯ 18 ಜನ ಫಲಾನುಭವಿಗಳು ಹಾಗೂ ಗಿರಿಜನ ಉಪ ಯೋಜನೆಯಡಿ ಐವರು ಫಲಾನುಭವಿಗಳಿಗೆ ಕುರಿ, ಮೇಕೆ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಕೊಂಡವರನ್ನು ಆಯ್ಕೆ ಮಾಡಲಾಗುವುದು. ಅರ್ಜಿದಾರರು ಆರ್‌ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ರೇಷನ್ ಕಾರ್ಡ್, ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು.

ಅರ್ಜಿಗಳನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ), ಪಶು ಆಸ್ಪತ್ರೆಯಿಂದ ಪಡೆದುಕೊಂಡು 10 ದಿನಗಳ ಒಳಗೆ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.