ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬಾಗಲಕೋಟೆ: ‘ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ರೂಪಿಸಲು ಒತ್ತಾಯಿಸಿ ಆಗಸ್ಟ್ 19ರಂದು ಬೆಂಗಳೂರಿನ ವಿಧಾನಸೌಧದ ಬಳಿ ಪ್ರತಿಭಟಿಸಲಾಗುವುದು’ ಎಂದು ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ ರಾಜ್ಯ ಸಂಚಾಲಕ ಯಲ್ಲಪ್ಪ ಹೆಗಡೆ ಹೇಳಿದರು.
‘ಕುರಿಗಾರರ ಮೇಲೆ ನಿರಂತರ ದೌರ್ಜನ್ಯ, ಹಲ್ಲೆ, ಜೀವ ಬೆದರಿಕೆ, ಕೊಲೆ, ಅತ್ಯಾಚಾರ, ಕುರಿ ಕಳವು ಪ್ರಕರಣಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ಶೋಷಿತ ಸಮುದಾಯಗಳು ಮತ್ತು ವಿವಿಧ ವೃತ್ತಿಪರರ ಹಿತಕ್ಕಾಗಿ ವಿಶೇಷ ಕಾಯ್ದೆಗಳನ್ನು ಜಾರಿಗೊಳಿಸಿದಂತೆ ಸಾಂಪ್ರದಾಯಿಕ ಕುರಿಗಾರಹಿಗಳ ಹಿತರಕ್ಷಣೆಗೂ ವಿಶೇಷ ಕಾಯ್ದೆ ರೂಪಿಸಿ, ಜಾರಿಗೊಳಿಸಬೇಕು. ಪ್ರಸಕ್ತ ಅಧಿವೇಶನದಲ್ಲೇ ಅದಕ್ಕೆ ಆದ್ಯತೆ ನೀಡಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.