
ರಾಂಪುರ: ಸಮೀಪದ ಶಿರೂರ ಪಟ್ಟಣದ ಪ್ರಸಿದ್ಧ ಸಿದ್ದೇಶ್ವರ ಜಾತ್ರೆ ಗುರುವಾರ ಸಡಗರ, ಸಂಭ್ರಮದೊಂದಿಗೆ ಜರುಗಿತು.
ಸ್ಥಳೀಯ ಶಿವಯೋಗಾಶ್ರಮದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಗುರುಗಳು ಉಪಸ್ಥಿತರಿದ್ದು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತ ಸಮೂಹದ ಜೈಕಾರದ ಘೋಷಣೆಯೊಂದಿಗೆ ಸಾಗಿ ಬಂದ ರಥಕ್ಕೆ ನೆರೆದ ಸಾವಿರಾರು ಸಂಖ್ಯೆಯ ಭಕ್ತರು ಹೂವು, ಹಣ್ಣು, ಪಳಾರ, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು.
ಹೊಸ್ತಿಲ ಹುಣ್ಣಿಮೆಯ ದಿನವಾದ ಗುರುವಾರ ಬೆಳಿಗ್ಗೆ ಸಿದ್ದೇಶ್ವರ ದೇವಸ್ಥಾನದಲ್ಲಿ ಸಿದ್ದೇಶ್ವರ ದೇವರಿಗೆ ರುದ್ರಾಭಿಷೇಕ, ಮಹಾಮಂಗಳಾರತಿ ಸೇರಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ನಂತರ ನಂದಿಧ್ವಜ ಮತ್ತು ಜೋಡಿ ಕಳಸಗಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ವೈಭವಗಳೊಂದಿಗೆ ಜರುಗಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.