ಬೀಳಗಿ: ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕಗಳ ಆಶ್ರಯದಲ್ಲಿ ಮೇ 20ರಂದು ನಡೆಯಲಿರುವ ಬಾಗಲಕೋಟೆ ಜಿಲ್ಲಾ ದ್ವಿತೀಯ ಕನ್ನಡ ಜಾನಪದ ಸಮ್ಮೇಳನದ ಅಧ್ಯಕ್ಷರಾಗಿ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಆಯ್ಕೆಯಾಗಿದ್ದು, ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಂ. ಸಾವಕಾರ ನೇತೃತ್ವದಲ್ಲಿ ಸನ್ಮಾನಿಸಿ ಆಹ್ವಾನಿಸಲಾಯಿತು.
ಕಜಾಪ ಜಿಲ್ಲಾ ಮತ್ತು ತಾಲ್ಲೂಕಾ ಘಟಕಗಳ ಪದಾಧಿಕಾರಿಗಳು ಸಿದ್ದಪ್ಪ ಬಿದರಿ ಅವರ ಮನೆಗೆ ತೆರಳಿ ಬಿದರಿ ದಂಪತಿಯನ್ನು ಆಹ್ವಾನಿಸಿದರು.
ಕಜಾಪ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಂ. ಸಾವಕಾರ ಮಾತನಾಡಿ, ‘ಸಿದ್ದಪ್ಪ ಬಿದರಿ ಕನ್ನಡ ಸಾರಸ್ವತ ಲೋಕಕ್ಕೆ ಹಲವು ಕೃತಿಗಳನ್ನು ನೀಡಿದ್ದು, ಜಾನಪದ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ನಾಡಿನಾದ್ಯಂತ ಶ್ರಮಿಸುತ್ತಿದ್ದಾರೆ. ಅವರ ಸಾಧನೆ ಗಮನಿಸಿ ಒಮ್ಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ’ ಎಂದು ಹೇಳಿದರು.
ಕಜಾಪ ಜಿಲ್ಲಾ ಖಜಾಂಚಿ ಸುರೇಶ ವಸ್ತ್ರದ , ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ದಾವಣಗೆರೆ, ಖಜಾಂಚಿ ಎಂ.ಬಿ. ತಾಂಬೋಳಿ, ಮಹಿಳಾ ಘಟಕದ ಅಧ್ಯಕ್ಷೆ ಎಚ್.ಬಿ. ಮಾಳಗೊಂಡ, ಎಂ.ಎಸ್. ಮಠಪತಿ, ಬಿ.ಎಂ. ಸಾಹುಕಾರ, ಶಿವಾನಂದ ಹಿರೇಮಠ, ಆನಂದರಾವ ನಾಯ್ಕ, ಎಸ್.ಬಿ. ಯಾವಗಲ್ಮಠ, ಮಹೇಶ ಮಾದರ, ಪಿ.ಎಂ. ನದಾಫ, ಶಂಕರ ಡಬರಿ, ಜೆ.ಎಂ. ಬಂಧುಗೋಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.