ಬಾಗಲಕೋಟೆ: 'ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮಾಡಲಿಲ್ಲ. ನಾನು ಮಾಡಿದೆ. ಆದರೂ ನನ್ನನ್ನು ಏಕೆ ದ್ವೇಷಿಸಿತ್ತೀರಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಪ್ರಶ್ನಿಸಿದರು.
ಜಿಲ್ಲೆಯ ಬಂಡಿಗಣಿ ಮಠದಲ್ಲಿ ಸೋಮವಾರ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ, ಸರ್ಕಾರಿ ಕಚೇರಿಗಳಲ್ಲಿ ಭಾವಚಿತ್ರ ಹಾಕುವಂತೆ ಆದೇಶಿಸಿದ್ದೇನೆ" ಎಂದರು.
ಆಗ ಕಾಶಪ್ಪನವರ, ‘ಇಲ್ಲ ಸರ್. ನಾವು ಬಹಳ ಪ್ರೀತಿ ಮಾಡುತ್ತೇವೆ‘ ಎಂದರು. ಅದಕ್ಕೆ ಸಿದ್ದರಾಮಯ್ಯ, ‘ನೀನು ಮಾಡಲ್ಲಪ್ಪ. ನೀನು ನನ್ನ ಅಭಿಮಾನಿ ಯಾವಾಗಲೂ. ಕೆಲವರು ಯಾಕೆ ದ್ವೇಷಿಸುತ್ತಾರೆ ಎಂಬುದು ನನಗಂತೂ ಗೊತ್ತಿಲ್ಲ. ನಾನು ಬಸವಣ್ಣನವರ ಕಟ್ಟಾ ಅನುಯಾಯಿ. 2013ರಲ್ಲಿ ಬಸವ ಜಯಂತಿಯಂದೇ ಪ್ರಮಾಣ ವಚನ ಸ್ವೀಕರಿಸಿದೆ. ಬಸವಣ್ಣನವರ ಸಮ ಸಮಾಜ ನಿರ್ಮಾಣವೇ ಸರ್ಕಾರದ ಗುರಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.