ಬಾಗಲಕೋಟೆ: ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿದ್ದಾರ್ಥ ಗೋಯಲ್ ಅವರನ್ನು ವರ್ಗಾವಣೆ ಮಾಡಿ ಆಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರಾಗಿದ್ದ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಐಆರ್‌ಎಸ್ ಅಧಿಕಾರಿಯಾಗಿದ್ದ ಗೋಯಲ್ ಅವರು, 2013ರಲ್ಲಿ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಬಾಗಲಕೋಟೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯಾಗಿದ್ದ ಅಮರನಾಥ ರೆಡ್ಡಿ ಅವರನ್ನು ಕರ್ನಾಟಕ ರಾಜ್ಯ ರಿಸರ್ವ್ ಪೊಲೀಸ್ ಒಂದನೇ ಬೆಟಾಲಿಯನ್ ಕಮಾಂಡೆಟ್ ಆಗಿ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.