ರಬಕವಿ ಬನಹಟ್ಟಿ: ತೇರದಾಳ ಮತಕ್ಷೇತ್ರದ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿಯೂ ಪಕ್ಷ ಮತ್ತು ಜಾತಿಭೇದ ಮರೆತು ಅಭಿವೃದ್ಧಿ ಮಾಡುವುದಾಗಿ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಇಲ್ಲಿನ ಬಸವೇಶ್ವರ ಸಮುದಾಯ ಭವನದಲ್ಲಿ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ಶಾಸಕ ಸವದಿ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಥಣಿ ತಾಲ್ಲೂಕು ಸಂಪರ್ಕಿಸುವ ಕೃಷ್ಣಾ ನದಿಗೆ ಸೇತುವೆ ನಿರ್ಮಾಣ ಕಾರ್ಯದ ಕುರಿತು ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಜೊತೆ ಚರ್ಚೆ ಮಾಡಿದ್ದೇನೆ. ರಸ್ತೆ, ಶೌಚಾಲಯ, ಶಾಲಾ ಕಾಲೇಜು ಅಭಿವೃದ್ಧಿಗಾಗಿ ಈಗಾಗಲೇ ಸಾಕಷ್ಟು ಅನುದಾನ ನೀಡಲಾಗಿದೆ. ಮತಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಯೊಬ್ಬರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು.
ಸ್ಥಳೀಯ ಹಿರೇಮಠದ ಶರಣಬಸವ ಶಿವಾಚಾರ್ಯರು ಮಾತನಾಡಿ, ಸಮಾಜಕ್ಕಾಗಿ ಸೇವೆ ಸಲ್ಲಿಸಿದವರನ್ನು ಸಮಾಜ ಗೌರವಿಸುತ್ತದೆ ಎಂದರು.
ಹಳೆ ಹುಬ್ಬಳ್ಳಿಯ ವೀರಭಿಕ್ಷಾವರ್ತಿ ಮಠದ ಶಿವಶಂಕರ ಶಿವಾಚಾರ್ಯರು, ಚಿಮ್ಮಡದ ಪ್ರಭು ದೇವರು ಸೇರಿದಂತೆ ವಿವಿಧ ಮಠಾಧೀಶರು, ಸಿದ್ದನಗೌಡ ಪಾಟೀಲ, ಬಾಬಾಗೌಡ ಪಾಟೀಲ, ಶ್ರೀಶೈಲ ಬೀಳಗಿ, ಧರೆಪ್ಪ ಉಳ್ಳಾಗಡ್ಡಿ, ಸಂಜಯ ತೆಗ್ಗಿ,ಅರುಣ ಬುದ್ನಿ, ಲಕ್ಕಪ್ಪ ಪಾಟೀಲ, ಸುರೇಶ ಅಕ್ಕಿವಾಟ, ವಿದ್ಯಾ ಧಬಾಡಿ, ಪವಿತ್ರಾ ತುಕ್ಕನ್ನವರ, ಮಹಾನಂದ ಹೊರಟ್ಟಿ, ಗೌರಿ ಮಿಳ್ಳಿ, ಸವಿತಾ ಹೊಸೂರ ಇದ್ದರು.
ಪುಸ್ತಕ ಕೊಡಿ: ಜನ್ಮದಿನದ ಸಂದರ್ಭದಲ್ಲಿ ಕಾರ್ಯಕರ್ತರಿಂದ ಶಾಲು, ಹೂವಿನ ಮಾಲೆ ಸ್ವೀಕರಿಸದೆ ಪುಸ್ತಕ ಹಾಗೂ ನೋಟಬುಕ್‌ಗಳನ್ನು ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.