
ರಬಕವಿ ಬನಹಟ್ಟಿ: ರಬಕವಿ ಬನಹಟ್ಟಿ ತಾಲ್ಲೂಕು ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಅವರು ಶನಿವಾರ ಸ್ಥಳೀಯ ನಗರ ಸಭೆಯ ಸಭಾ ಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಸಮಸ್ಯೆಯಿಂದಾಗಿ ಕ್ಷೇತ್ರದ ಸಾವಿರಾರು ನೈಜ ಫಲಾನುಭವಿಗಳ ಬಿಪಿಎಲ್ ಕಾರ್ಡ್‌ಗಳು ರದ್ಧಾಗಿವೆ. ಅದರಂತೆ ಸರ್ಕಾರದ ವಿವಿಧ ಪಿಂಚಣಿ ಸೌಲಭ್ಯಗಳನ್ನು ಪಡೆಯುವವರಿಗೂ ಇದರಿಂದ ತೊಂದರೆಯಾಗಿದೆ. ಆದಷ್ಟು ಬೇಗನೆ ಅರ್ಹರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿಯವರಿಗೆ ಶಾಸಕ ಸಿದ್ದು ಸವದಿ ತಿಳಿಸಿದರು.
ಸಭೆಯಲ್ಲಿ 43 ಇಲಾಖೆಗಳಲ್ಲಿ ಕೇವಲ 20 ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರ ಸಿದ್ದಪ್ಪ ಪಟ್ಟಿಹಾಳ ಅವರಿಗೆ ತಿಳಿಸಿದರು.
ಸಭೆಯಲ್ಲಿ ತೇರದಾಳ ತಹಶೀಲ್ದಾರ್ ವಿಜಯಕುಮಾರ ಕಡಕೋಳ, ಆಡಳಿತಾಧಿಕಾರಿ ಬಿ.ಎ.ಫೀರಜಾದೆ, ಅಶೋಕ ಬಸನ್ನವರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.