ರಬಕವಿ ಬನಹಟ್ಟಿ: ಪತ್ರಿಕೆಗಳು ಇಂದು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುತ್ತಿವೆ. ಪತ್ರಿಕಾ ರಂಗದ ಸೇವೆ ಮಹತ್ವದ್ದಾಗಿದೆ. ಪತ್ರಿಕೆಗಳು ಶೋಷಿತರ ಧ್ವನಿಯಾಗಲಿ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ರಬಕವಿ ಬನಹಟ್ಟಿ ನಗರ ಸಭೆಯ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಭಾನುವಾರ ನಡೆದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪತ್ರಿಕೆಗಳು ಶಾಸಕಾಂಗ ಮತ್ತು ಕಾರ್ಯಾಂಗವನ್ನು ಎಚ್ಚರಿಸುವ ಕಾರ್ಯ ಮಾಡುತ್ತವೆ. ದೇಶದ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಮುಖ್ಯವಾಗಿದೆ. ರಬಕವಿ ಬನಹಟ್ಟಿಯಲ್ಲಿ ಪತ್ರಿಕಾ ಭವನ ನಿರ್ಮಿಸಲು ಪ್ರಯತ್ನ ಮಾಡುತ್ತೇನೆ. ಈ ನಿಟ್ಟಿನಲ್ಲಿ ₹1 ಲಕ್ಷ ನೀಡುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಮಾತನಾಡಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವಂತಾಗಬೇಕು. ಪ್ರತಿ ಮನೆಗೂ ಪತ್ರಿಕೆಗಳು ತಲುಪುವಂತಾಗಬೇಕು. ಪತ್ರಿಕಾ ಭವನ ನಿರ್ಮಾಣಕ್ಕೆ ಸರ್ಕಾರದಿಂದ ವಿಶೇಷ ನೀಡುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದರು.
ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಧಲಬಂಜನ ಮಾತನಾಡಿ, ಬದಲಾಗುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿಯೂ ನಾವು ಪತ್ರಿಕೆಗಳನ್ನು ಕೊಂಡು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಪೌರಾಯುಕ್ತ ರಮೇಶ ಜಾಧವ, ಶಿವಾನಂದ ಮಹಾಬಳಶೆಟ್ಟಿ, ಕಿರಣ ಆಳಗಿ, ಪ್ರಕಾಶ ಕುಂಬಾರ ಮಾತನಾಡಿದರು. ವಿಶ್ವಜ ಕಾಡದೇವರ ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಕಾರ್ಜುನ ತುಂಗಳ, ಜಯವಂತ ಕಾಡದೇವರ ಬಸವರಾಜ ಪಟ್ಟಣ, ವೆಂಕಟೇಶ ನಿಂಗಸಾನಿ, ಮಹಾದೇವ ಕವಿಶೆಟ್ಟಿ, ಡಾ.ರವಿ ಜಮಖಂಡಿ, ಬಿ.ಆರ್.ಗೊಡ್ಡಾಳೆ,ಸಂಜಯ ಹನಗಂಡಿ, ಶಿವಲಿಂಗ ಟಿರಕಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.