ADVERTISEMENT

ಬಾಗಲಕೋಟೆ | SIR: ಜನರಲ್ಲಿ ಜಾಗೃತಿ ಮೂಡಿಸಲು ಸಲಹೆ

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 2:59 IST
Last Updated 30 ಅಕ್ಟೋಬರ್ 2025, 2:59 IST
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಿದ್ದತೆ ಸಭೆಯಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಮಾತನಾಡಿದರು
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಿದ್ದತೆ ಸಭೆಯಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಮಾತನಾಡಿದರು   
ಕಾಲೇಜುಗಳಲ್ಲಿ ಜಾಗೃತಿ ಕರಪತ್ರ ಹಂಚಿರಿ ಅರ್ಹರನ್ನು ಸೇರ್ಪಡೆಗೊಳಿಸಿ

ಬಾಗಲಕೋಟೆ: ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಎಲ್ಲ ಹಂತದಲ್ಲಿ ಜನ ಸಾಮಾನ್ಯರಿಗೆ ಮಾಹಿತಿ ತಿಳಿಸುವ ನಿಟ್ಟಿನಲ್ಲಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಿದ್ದತೆ, ಸ್ವೀಪ್ ಹಾಗೂ ಇಎಲ್‌ಸಿ ಚಟುವಟಿಕೆಗಳ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಬ್ಯಾನರ್, ಕರಪತ್ರ, ಗೋಡೆ ಬರಹ ಸೇರಿದಂತೆ ವಿವಿಧ ಚಟುವಟಿಗಳ ಮೂಲಕ ಜನರಿಗೆ ಮಾಹಿತಿ ತಲುಪಿಸಬೇಕು ಎಂದು ಸೂಚಿಸಿದರು.

ಚುನಾವಣೆ ಸಂದರ್ಭದಲ್ಲಿ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ, ಸ್ವೀಪ್ ಚಟುವಟಿಕೆ ಬಹುಮುಖ್ಯವಾಗಿದೆ. ದೋಷರಹಿತ ಹಾಗೂ ಪರಿಶುದ್ದವಾದ ಮತದಾರರ ಪಟ್ಟಿ ಸಿದ್ಧಪಡಿಸಲು ಪರಿಷ್ಕರಣೆ ಅನಿವಾರ್ಯವಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಜಾಗೃತಿ ಅಗತ್ಯವಾಗಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಶಶಿಧರ ಕುರೇರ ಮಾತನಾಡಿ, ಸ್ವೀಪ್ ಮತ್ತು ಎಲೆಕ್ಟೋರಲ್ ಲಿಟರಸಿ ಕ್ಲಬ್‍ಗಳಡಿಯಲ್ಲಿ ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿಯನ್ನು ಸಭೆಗೆ ತಿಳಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ.ಎನ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜಾ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ, ಸಹಾಯಕ ಯೋಜನಾ ನಿರ್ದೇಶಕ ಭೀಮಪ್ಪ ತಳವಾರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.