ಬೀಳಗಿ: ಸ್ಕಿಲ್ ಇಂಡಿಯಾ ಯೋಜನೆಯಿಂದ ಯುವಕರು ಸಂಪನ್ಮೂಲ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಿದ್ದಾರೆ. ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್. ಪಾಟೀಲ ಹೇಳಿದರು.
ಸ್ಥಳೀಯ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
79ನೇ ಸ್ವಾತಂತ್ರೋತ್ಸವದ ಸವಿಗಳಿಗೆಯಲ್ಲಿರುವ ನಾವು ಒಗ್ಗಟ್ಟಿನಿಂದ ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.
ಟಿ.ಎ.ಪಿ.ಸಿ.ಎಮ್.ಎಸ್.ನ ಮುಖ್ಯ ಕಾರ್ಯನಿರ್ವಾಹಕ ಶಿವು ಕೋಟಿ, ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಎಸ್.ವ್ಹಿ.ವ್ಹಿ.ಎಸ್. ಕ್ಯಾಂಪಸ ಸಲಹಾ ಸಮಿತಿ ಸದಸ್ಯರಾದ ಆರ್.ಎಸ್.ಪಾಟೀಲ, ಶಿವನಗೌಡ ಪಾಟೀಲ, ಶ್ರೀಶೈಲ ತುಂಬರಮಟ್ಟಿ, ಸಿದ್ದನಗೌಡ ಪಾಟೀಲ, ಎಚ್. ಎಸ್. ನಾಗನಗೌಡರ, ರವಿ ನಾಗನಗೌಡರ, ಶಿವಾಜಿ ಚವ್ಹಾಣ, ಸಂಸ್ಥೆಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಆಡಳಿತಾಧಿಕಾರಿ ವ್ಹಿ. ಎಸ್. ಮೇಟಿ, ಪಿ.ಯು. ವಾಣಿಜ್ಯ ವಿಭಾಗದ ಪ್ರಾಚಾರ್ಯ ಜಿ. ಆರ್. ಪಾಟೀಲ, ಕಾಲೇಜಿನ ವಿಜ್ಞಾನ ವಿಭಾಗದ ಪ್ರಾಚಾರ್ಯ ಎಮ್. ಬಿ. ವೆಂಕಟಾಪೂರ, ಸಿ.ಬಿ.ಎಸ್.ಇ. ಪ್ರಾಚಾರ್ಯ ಉದಯಕುಮಾರ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.