ಮಹಾಲಿಂಗಪುರ: ‘ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಶರಣ. ಅವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪವಾಗಿವೆ’ ಎಂದು ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಹೇಳಿದರು.
ಪಟ್ಟಣದ ಪುರಸಭೆ ಕಚೇರಿಯಲ್ಲಿ ಗುರುವಾರ ಹಡಪದ ಅಪ್ಪಣ್ಣನವರ ಜಯಂತಿ ಅಂಗವಾಗಿ ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
‘ಹಡಪದ ಅಪ್ಪಣ್ಣ ಅವರು ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ’ ಎಂದರು.
ಮುಖ್ಯಾಧಿಕಾರಿ ಎನ್.ಎ.ಲಮಾಣಿ, ಸದಸ್ಯ ಮುಸ್ತಾಕ ಚಿಕ್ಕೋಡಿ, ಎಸ್.ಎಂ.ಕಲಬುರಗಿ, ಸಿ.ಎಸ್.ಮಠಪತಿ, ಎಂ.ಕೆ.ದಳವಾಯಿ, ಎಸ್.ಬಿ.ಚೌಧರಿ, ಎಸ್.ಜಿ.ಕತ್ತಿ, ಕಾಂತು ಹಡಪದ, ಮಹಾಲಿಂಗ ಮಾಂಗ, ಮಂಜುಳಾ ಬಂಡಿವಡ್ಡರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.