ಬಾಗಲಕೋಟೆ: ‘ಸಮಾಜದ ಎಲ್ಲ ವರ್ಗಗಳಿಗೆ ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ಶಾಸಕ ಎಚ್.ವೈ. ಮೇಟಿ ಹೇಳಿದರು.
ಸೆ.22ರಿಂದ ಅ.7ರವರೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸೋಮವಾರ ಚಾಲನೆ ನಿಡಿ ಮಾತನಾಡಿದ ಅವರು, ‘ಸಮೀಕ್ಷೆ 60 ಪ್ರಶ್ನೆಗಳನ್ನೊಳಗೊಂಡಿದ್ದು, ಗಣತಿದಾರರಿಗೆ ಸರಿಯಾದ ಮಾಹಿತಿ ನೀಡಬೇಕು’ ಎಂದು ಸಾರ್ವಜನಿಕರಲ್ಲಿ ಕೋರಿದರು.
ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜಾ, ತಹಶೀಲ್ದಾರ್ ವಾಸುದೇವ ಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ಸುರೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಇದ್ದರು.
ಬಾಗಲಕೋಟೆ ತಾಲ್ಲೂಕು ವ್ಯಾಪ್ತಿಯಲ್ಲಿ 86,670 ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಈ ಸಮೀಕ್ಷೆ ಕಾರ್ಯಕ್ಕಾಗಿ 771 ಸಮೀಕ್ಷಾ ಬ್ಲಾಕ್‍ಗಳನ್ನು ಗುರುತಿಸಿ, ಪ್ರತಿ ಬ್ಲಾಕ್‍ಗೆ ಒಬ್ಬರಂತೆ ಸಮೀಕ್ಷಾದಾರರನ್ನು ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.