
ಬಾಗಲಕೋಟೆ: ಸಕಲ ಜೀವಿಗಳಿಗೂ ಅಗತ್ಯವಾಗಿರುವ ಮಣ್ಣಿನ ಫಲವತ್ತತೆ ಬಗ್ಗೆ ರೈತರು ವಿಶೇಷ ಗಮನಹರಿಸುವ ಅಗತ್ಯವಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.
ತೋಟಗಾರಿಕೆ ವಿಶ್ವವಿದ್ಯಾಲಯದ ಸಭಾಭವನದಲ್ಲಿ ತೋಟಗಾರಿಕೆ ವಿವಿ, ಕೃಷಿ ಇಲಾಖೆ, ಪಿಓಪಿ ಸೆಂಟರ್, ತೋಟಗಾರಿಕೆ ವಿವಿಯ ವಿಸ್ತರಣಾ ನಿರ್ದೇಶನಾಲಯ ಮತ್ತು ಪ್ಯಾರಾದೀಪ ಫಾಸ್ಪೇಟ್ಸ್ ಲಿಮಿಟೆಡ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಮಣ್ಣು ದಿನಾಚರಣೆ ಹಾಗೂ ರೈತ ಉತ್ಪಾದಕರ ಸಂಸ್ಥೆಗಳಿಗೆ ವಿವಿಧ ಸಂಸ್ಥೆಗಳ ಜೊತೆಗೆ ಸಂಪರ್ಕ ಮತ್ತು ವ್ಯವಹಾರ ಅಭಿವೃದ್ದಿ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದಲ್ಲಿ ಒಂದೆಡೆ ಕೃಷಿಯಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ. ಮತ್ತೊಂದೆಡೆ ಮಣ್ಣಿನ ಫಲವತ್ತತೆ ಕುಸಿಯುತ್ತಿದೆ. ಹಾಗಾಗಿ ಕೃಷಿಯಲ್ಲಿ ಪ್ರಗತಿಯ ಜೊತೆಗೆ ಮಣ್ಣಿನ ಫಲವತ್ತತೆ ಬಗ್ಗೆಯೂ ಮುತುವರ್ಜಿ ವಹಿಸುವುದು ಅವಶ್ಯವಾಗಿದೆ ಎಂದ ಸಿಇಓ, ಪ್ರತಿಯೊಬ್ಬ ರೈತರು ಆರೋಗ್ಯಯುತ ಮಣ್ಣಿನ ಸಂರಕ್ಷಣೆ ಬಗ್ಗೆ ತಿಳಿದುಕೊಂಡು ಪ್ರಗತಿಯತ್ತ ಸಾಗಬೇಕೆಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ ಮಾತನಾಡಿ, ಸರ್ಕಾರ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ರೈತರಿಗೆ ಮಣ್ಣು ಆರೋಗ್ಯ ಕಾರ್ಡಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಭೂ ಸಂಪನ್ಮೂಲ ಮಾಹಿತಿ ಕಾರ್ಡ ಸದ್ಬಳಕೆ, ರೈತರ ಉತ್ಪಾದಕರ ಸಂಸ್ಥೆಗಳಿಗೆ ತಾಂತ್ರಿಕ ಮಾಹಿತಿ, ಕರ್ನಾಟಕ ಬ್ಯಾಂಕ್ ವತಿಯಿಂದ ರೈತ ಉತ್ಪಾದಕ ಸಂಸ್ಥೆಗಳಿಗೆ ಲಭ್ಯವಿರುವ ಯೋಜನೆಗಳು ಮತ್ತು ಅಭಿವೃದ್ದಿ ಅವಕಾಶಗಳು, ಸೆಲ್ಕೋ ಸೋಲಾರ ಸಂಸ್ಥೆಯಲ್ಲಿ ಲಭ್ಯವಿರುವ ಯೋಜನೆಗಳು ಹಾಗೂ ಅವಕಾಶಗಳ ಕುರಿತು ತಾಂತ್ರಿಕ ಮಾಹಿತಿ ನೀಡಲಾಯಿತು.
ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟಿ, ತೋಟಗಾರಿಕೆ ವಿವಿಯ ಡೀನ್ ಡಾ.ತಮ್ಮಯ್ಯ, ಕನರ್ಾಟಕ ಗ್ರಾಮೀಣ ಬ್ಯಾಂಕ್ನ ವಿಭಾಗೀಯ ವ್ಯವಸ್ಥಾಪಕ ಪರಮೇಶ್ವರ ಗದ್ದೆ, ಪ್ಯಾರಾದೀಪ ಫಾಸ್ಟೇಟ್ಸ್ ಲಿಮಿಟೆಡ್‌ನ ಜಿಎಂ ಗಣೇಶ ಹೆಗ್ಡೆ, ಜನರಲ್ ಮ್ಯಾನೇಜರ ಆದರ್ಶ, ಎಫ್ಪಿಓ ಪ್ರತಿನಿಧಿಗಳಾದ ಮಲ್ಲನಗೌಡ ಪಾಟೀಲ, ಪ್ರಭು ಮುಗಳೊಳ್ಳಿ, ಮಂಜುನಾಥ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.