ಗುಳೇದಗುಡ್ಡ: ಉಗ್ರರ ವಿರುದ್ಧ ಕೈಗೊಂಡ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಭಾರತೀಯರೆಲ್ಲ ಹೆಮ್ಮೆ ಪಡುವಂಥದ್ದು ಎಂದು ಬಿಜೆಪಿ ಮುಖಂಡ ಅಶೋಕ ಹೆಗಡೆ ಹೇಳಿದರು.
ಪಟ್ಟಣದ ಭಂಡಾರಿ ಕಾಲೇಜ್ ಕ್ರಾಸ್ನಲ್ಲಿ ಸಾರ್ವಜನಿಕರು, ಕರವೇ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಕಿಸ್ತಾನದ ಗಡಿಯಲ್ಲಿರುವ 9 ಉಗ್ರಗಾಮಿ ನೆಲೆಗಳನ್ನು ನೆಲಸಮ ಮಾಡಿ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿದ್ದಾರೆ ಎಂದು ಹೇಳಿದರು.
ಕರವೇ ಅಧ್ಯಕ್ಷ ರವಿ ಅಂಗಡಿ ಮಾತನಾಡಿದರು. ಸಾರ್ವಜನಿಕರು, ಕರವೇ ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.