ADVERTISEMENT

ಬಾಗಲಕೋಟೆ | ಕಲ್ಲು ತೂರಾಟ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 19:06 IST
Last Updated 22 ಫೆಬ್ರುವರಿ 2026, 19:06 IST
ಶ್ರೀರಾಮುಲು
ಶ್ರೀರಾಮುಲು   

ಬಾಗಲಕೋಟೆ: ‘ಕಲ್ಲು ತೂರಾಟ ಮಾಡಿದವರು, ಅವರಿಗೆ ಕುಮ್ಮಕ್ಕು ನೀಡಿದವರನ್ನು ಬಂಧಿಸಬೇಕು. ಅದು ಬಿಟ್ಟು, ಹಿಂದೂ ಕಾರ್ಯಕರ್ತರ ಬಂಧನ ಏಕೆ’ ಎಂದು ಮಾಜಿ ಸಚಿವ ಶ್ರೀರಾಮುಲು ಪ್ರಶ್ನಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಿಡಿಗೇಡಿ ಮುಸ್ಲಿಮರನ್ನು ಬಂಧಿಸುವವರೆಗೂ ಬಿಡುವುದಿಲ್ಲ. ಅವರನ್ನು ಗಡಿಪಾರು ಮಾಡಬೇಕು. ಅವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಗಲಾಟೆ ತಡೆಯುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಟೀಕಿಸಿದರು.

‘ಕಲ್ಲು ತೂರಾಟ ಪ್ರಕರಣದಲ್ಲಿ ಮಸೀದಿಯ ಸಮಿತಿಯಲ್ಲಿ ಇರುವವರೂ ಶಾಮೀಲಾಗಿದ್ದಾರೆ. ಇದೊಂದು ಪೂರ್ವನಿಯೋಜಿತ ಕೃತ್ಯ’ ಎಂದು ಆರೋಪಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.