ADVERTISEMENT

ಬಾಗಲಕೋಟೆ | ಎಸ್ಸೆಸ್ಸೆಲ್ಸಿ ಪರೀಕ್ಷೆ: 241 ವಿದ್ಯಾರ್ಥಿಗಳು ಗೈರು

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 16:28 IST
Last Updated 25 ಮಾರ್ಚ್ 2024, 16:28 IST
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭೇಟಿ ನೀಡಿದರು
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭೇಟಿ ನೀಡಿದರು   

ಬಾಗಲಕೋಟೆ: ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, ಪ್ರಥಮ ಭಾಷೆ ಪರೀಕ್ಷೆಗೆ 31,496 ವಿದ್ಯಾರ್ಥಿಗಳ ಪೈಕಿ 31,255 ವಿದ್ಯಾರ್ಥಿಗಳು ಹಾಜರಾಗಿದ್ದರು. 241 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಬಾದಾಮಿ ತಾಲ್ಲೂಕಿನಲ್ಲಿ 5,286 ಪೈಕಿ 5,312 ವಿದ್ಯಾರ್ಥಿಗಳು ಹಾಜರಾಗಿದ್ದು, 30 ಮಂದಿ ಗೈರಾಗಿದ್ದಾರೆ. ಬಾಗಲಕೋಟೆ ತಾಲ್ಲೂಕಿನಲ್ಲಿ 4,720 ಪೈಕಿ 4,684 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಬೀಳಗಿ ತಾಲ್ಲೂಕಿನ 2,865 ವಿದ್ಯಾರ್ಥಿಗಳ ಪೈಕಿ 2,845 ಜನ ಹಾಜರಾಗಿದ್ದು, 20 ಜನ ಗೈರಾಗಿದ್ದಾರೆ. ಹುನಗುಂದ ತಾಲ್ಲೂಕಿನ 5,170 ಪೈಕಿ 5,135 ಹಾಜರಾಗಿ 35 ಜನ ಗೈರು, ಜಮಖಂಡಿ ತಾಲ್ಲೂಕಿನ 8,121 ಪೈಕಿ 8,054 ಹಾಜರಾಗಿ 67 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮುಧೋಳ ತಾಲ್ಲೂಕಿನ 5,278 ವಿದ್ಯಾರ್ಥಿಗಳ ಪೈಕಿ 5,225 ಹಾಜರಾಗಿ 53 ಜನ ಗೈರಾಗಿದ್ದಾರೆ. ಸೋಮವಾರದ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ ತಿಳಿಸಿದ್ದಾರೆ.

ADVERTISEMENT

ನವನಗರದ ಅಂಜುಮನ್ ಪ್ರೌಢಶಾಲೆ ಹಾಗೂ ಆದರ್ಶ ವಿದ್ಯಾಲಯದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭೇಟಿ ನೀಡಿ ಪರಿಶೀಲಿಸಿದರು.

ಪರೀಕ್ಷೆ ಸುಸೂತ್ರವಾಗಿ ನಡೆದಿರುವ ಬಗ್ಗೆ ಹಾಗೂ ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳ ಮಾಹಿತಿಯನ್ನು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಂದ ಪಡೆದುಕೊಂಡರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.