ADVERTISEMENT

ಬೀಳಗಿ | ಅನ್ಯ ಜಾತಿಗಳ ಸೇರ್ಪಡೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2025, 2:36 IST
Last Updated 27 ಸೆಪ್ಟೆಂಬರ್ 2025, 2:36 IST
ಬೀಳಗಿ ತಹಶೀಲ್ದಾರ್ ಕಚೇರಿಯಲ್ಲಿ ರಾಜ್ಯದಲ್ಲಿ ಇತರ ಜಾತಿಗಳನ್ನು ಎಸ್ಟಿಗೆ ಸೇರಿಸುತ್ತಿರುವುದನ್ನು ವಿರೋಧಿಸಿ ವಾಲ್ಮೀಕಿ ಸಮುದಾಯದ ಮುಖಂಡರು ತಹಶೀಲ್ದಾರ್‌ ವಿನೋದ ಹತ್ತಳ್ಳಿ ಅವರಿಗೆ ಮನವಿ ಸಲ್ಲಿಸಿದರು
ಬೀಳಗಿ ತಹಶೀಲ್ದಾರ್ ಕಚೇರಿಯಲ್ಲಿ ರಾಜ್ಯದಲ್ಲಿ ಇತರ ಜಾತಿಗಳನ್ನು ಎಸ್ಟಿಗೆ ಸೇರಿಸುತ್ತಿರುವುದನ್ನು ವಿರೋಧಿಸಿ ವಾಲ್ಮೀಕಿ ಸಮುದಾಯದ ಮುಖಂಡರು ತಹಶೀಲ್ದಾರ್‌ ವಿನೋದ ಹತ್ತಳ್ಳಿ ಅವರಿಗೆ ಮನವಿ ಸಲ್ಲಿಸಿದರು   

ಬೀಳಗಿ: ‘ರಾಜ್ಯದಲ್ಲಿ ಇತರ ಜಾತಿಗಳನ್ನು ಎಸ್ಟಿಗೆ ಸೇರಿಸುತ್ತಿರುವುದನ್ನು ವಿರೋಧಿಸಿ, ಅನ್ಯ ಜಾತಿಯವರು ಎಸ್‌ಟಿ ಖೊಟ್ಟಿ ಜಾತಿ ಪ್ರಮಾಣಪತ್ರಗಳನ್ನು ಪಡೆದು ವಂಚನೆ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಾಹಾಸಭಾ ಸಮಾಜದವರು ಪಟ್ಟಣದಲ್ಲಿ ಗುರುವಾರ ರ‍್ಯಾಲಿಯೊಂದಿಗೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ವಿನೋದ ಹತ್ತಳ್ಳಿ ಅವರಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ಸಮಾಜದ ಮುಖಂಡರು ಸೇರಿ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿ ಸರ್ಕಾರ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಾಲ್ಮೀಕಿ ನಾಯಕ ಮಾಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ವೈ. ಜಾನಮಟ್ಟಿ ಮಾತನಾಡಿ, ‘ನಾಯಕ ಸಮಾಜಕ್ಕೆ ಸಿಗಬೇಕಾದ ಸವಲತ್ತುಗಳನ್ನು ಅನ್ಯ ಜಾತಿಯವರು ಖೊಟ್ಟಿ ಜಾತಿ ಪ್ರಮಾಣಪತ್ರ ಪಡೆದು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಕ್ಷಣದಿಂದಲೇ ತಡೆಗಟ್ಟಬೇಕು. 2 ಲಕ್ಷಕ್ಕೂ ಅಧಿಕ ನಕಲಿ ಜಾತಿ ಪ್ರಮಾಣಪತ್ರಗಳನ್ನು ನೀಡಲಾಗಿದ್ದು, ಇದರ ಬಗ್ಗೆ ವಿಚಾರಣೆ ನಡೆಸಿ, ನಕಲು ಜಾತಿ ಪತ್ರಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಮುಖಂಡ ಎಂ.ವೈ. ವಡವಾನಿ ಮಾತನಾಡಿ, ‘ಪರಿಶಿಷ್ಟ ಪಂಗಡದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ವಾಲ್ಮೀಕಿ ಸಮಾಜವು ನಿರಂತರ ಹೋರಾಟ ನಡೆಸಿ ಶೇ 3ರಷ್ಟು ಇದ್ದ ಮೀಸಲಾತಿಯನ್ನು ಶೇ 7ಕ್ಕೆ ಏರಿಕೆಗೆ ಕಾರಣವಾಗಿದೆ ಎಂದರು.

ವೀರ ಸಿಂಧೂರ ಲಕ್ಷ್ಮಣ ಟ್ರಸ್ಟ್ ಅಧ್ಯಕ್ಷ ಶಂಕರ ತಳವಾರ, ಬಿ.ಎಸ್. ಗೋನಾಳ, ದ್ಯಾಮನಗೌಡ ಪಾಟೀಲ, ಸುರೇಂದ್ರ ನಾಯಕ, ರಮೇಶ ನಾಯಕ, ತಿಪ್ಪಣ್ಣ ಸಂಜೀವಪ್ಪಗೊಳ, ಹನಮಂತ ಕಟ್ಟೆಪ್ಪನವರ, ಬೆನ್ನಪ್ಪ ಬೀಳಗಿ, ಹನಮಂತ ಹಲಗಲಿ, ಪ್ರೇಮಾ ಹಲಗಲಿ, ಶ್ರೀಶೈಲ ಜೋಗೆನ್ನವರ, ಸೋಮು ಕೂಗಟಿ, ಶಿವು ಸಂಕನ್ನವರ, ಸದಾಶಿವ ಜುಂಜೂರಿ, ಯಲ್ಲಪ್ಪ ಸಂಶಿ, ಶ್ರೀಕಾಂತ ತಳವಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.