
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಡಿಯಿಂದ ಫೆ.20 ಬೆಳಿಗ್ಗೆಯಿಂದ ಫೆ.24ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆ ನಗರ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆಯುಧಗಳನ್ನು ಹಿಡಿದುಕೊಂಡು ತಿರುಗಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಭೆ, ಸಮಾರಂಭ, ಪ್ರತಿಭಟನೆ ಮಾಡುವುದನ್ನು ನಿಷೇಧಿಸಲಾಗಿದೆ. ಶಾಂತಿಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ತಿಳಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.