
ಪ್ರಜಾವಾಣಿ ವಾರ್ತೆಬಾಗಲಕೋಟೆ: ಜಿಲ್ಲೆಯ ಜಮಖಂಡಿ, ಲೋಕಾಪುರ, ಬೀಳಗಿಯಲ್ಲಿ ಪ್ರತಿ ಟನ್ ಕಬ್ಬಿಗೆ ₹3,500 ಬೆಲೆ ನೀಡಬೇಕು ಎಂದು ಅಗ್ರಹಿಸಿ ಗುರುವಾರ ರೈತರು ಪ್ರತಿಭಟನೆ ಮಾಡಿದರು.
ಕಬ್ಬಿಗೆ ದರ ನಿಗದಿ ಮಾಡಿ ಕಾರ್ಖಾನೆ ಆರಂಭಿಸಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
ರಸ್ತೆಯಲ್ಲಿ ವಾಹನ ಸಂಚಾರ ತಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು
ಜಮಖಂಡಿಯ ದೇಸಾಯಿ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕಬ್ಬು ಬೆಳೆಗಾರರ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು, ಆಟೊ ಚಾಲಕರು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಲೋಕಾಪುರ ಬಸವೇಶ್ವರ ವೃತ್ತದಲ್ಲಿಯೂ ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.