ADVERTISEMENT

ಬಾಗಲಕೋಟೆ | ಸೂಪರ್‌ ಸ್ಟೆಷಾಲಿಟಿ ಆಸ್ಪತ್ರೆ ಕನಸು ನನಸು: ವೀರಣ್ಣ ಚರಂತಿಮಠ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 4:19 IST
Last Updated 28 ಅಕ್ಟೋಬರ್ 2025, 4:19 IST
ಬಾಗಲಕೋಟೆಯಲ್ಲಿ ಸೋಮವಾರ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಪೂಜೆ ನೆರವೇರಿಸಿದರು
ಬಾಗಲಕೋಟೆಯಲ್ಲಿ ಸೋಮವಾರ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಪೂಜೆ ನೆರವೇರಿಸಿದರು   

ಬಾಗಲಕೋಟೆ: ಬಿ.ವಿ.ವಿ ಸಂಘದಿಂದ ಜಿಲ್ಲೆಯಲ್ಲಿ ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದು ಬಹುದಿನಗಳ ಕನಸಾಗಿತ್ತು. ಆ ಕನಸು ಈಗ ನನಸಾಗಿದೆ ಎಂದು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು. 

ಸೋಮವಾರ ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜು ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡದ ಪೂಜಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುಮಾರೇಶ್ವರ ಆಸ್ಪತ್ರೆಯಲ್ಲಿ ಈಗಾಗಲೇ ಸೂಪರ್ ಸ್ಪೆಷಾಲಿಟಿ ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದರು.

₹250 ಕೋಟಿ ವೆಚ್ಚದಲ್ಲಿ 400 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗಿದೆ. ಸುಸಜ್ಜಿತ 8 ಶಸ್ತ್ರಚಿಕಿತ್ಸಾ ಕೊಠಡಿಗಳು,  ಕ್ಯಾಥ್‍ಲ್ಯಾಬ್ ಸೌಲಭ್ಯ ಕಲ್ಪಿಸಲಾಗಿದೆ. ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ ಎಂದರು.

ADVERTISEMENT

ಸಾವಳಗಿಮಠದ ಶಿವಲಿಂಗೇಶ್ವರ ಸ್ವಾಮೀಜಿ ಪೂಜೆ ನೆರವೇರಿಸಿ ಮಾತನಾಡಿ, ರಾಜ್ಯದಲ್ಲೇ ಒಂದು ಮಾದರಿ ಆಸ್ಪತ್ರೆಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಕೋಟೆಕಲ್ಲಿನ ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ,  ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಮತ್ತಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.