ಜಮಖಂಡಿ: ತಾಲ್ಲೂಕು ಗಾಣಿಗ ಸಮಾಜ ಹಾಗೂ ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಹಾಗೂ ಪಿಯು ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಗಾಣಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಕೆ.ಕೆ. ತುಪ್ಪದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 25ರೊಳಗೆ ಸೂಕ್ತ ದಾಖಲೆಗಳೊಂದಿಗೆ ನಗರದ ಜ್ಯೋತಿ ಕೋ-ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಅರ್ಜಿ ನೀಡಬೇಕು. ಹೆಚ್ಚಿನ ಮಾಹಿತಿಗೆ 9448229675, 9945780844 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.