ADVERTISEMENT

‘2 ಸಾವಿರ ಗಿಡ ನೆಡುವ ಗುರಿ’

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 16:16 IST
Last Updated 9 ಜೂನ್ 2025, 16:16 IST
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಾದಾಮಿ ನಿಸರ್ಗ ಬಳಗದ ಸದಸ್ಯರು ಕೋಣಮ್ಮ ದೇವಾಲಯದ ಆವರಣದಲ್ಲಿ ಗಿಡಗಳನ್ನು ನೆಟ್ಟರು
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಾದಾಮಿ ನಿಸರ್ಗ ಬಳಗದ ಸದಸ್ಯರು ಕೋಣಮ್ಮ ದೇವಾಲಯದ ಆವರಣದಲ್ಲಿ ಗಿಡಗಳನ್ನು ನೆಟ್ಟರು   

ಬಾದಾಮಿ: ‘ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತಾಪಮಾನ ನಿಯಂತ್ರಿಸಲು ಪ್ರತಿಯೊಬ್ಬರೂ ಗಿಡವನ್ನು ನೆಟ್ಟು ಪೋಷಿಸಬೇಕು’ ಎಂದು ನಿಸರ್ಗ ಬಳಗದ ಅಧ್ಯಕ್ಷ ಎಸ್.ಎಚ್. ವಾಸನ ಹೇಳಿದರು.

ಇಲ್ಲಿನ ಕೋಣಮ್ಮ ದೇವಾಲಯದ ಆವರಣದಲ್ಲಿ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡವನ್ನು ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಾದಾಮಿ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿಸರ್ಗ ಬಳಗವು 2017ರಿಂದ ಈವರೆಗೆ 15 ಸಾವಿರ ಸಸಿಗಳನ್ನು ಬೆಳೆಸಿ ಅವುಗಳನ್ನು ಸಂರಕ್ಷಿಸಲಾಗಿದೆ. ಪ್ರಸಕ್ತ ವರ್ಷ ತಾಲ್ಲೂಕಿನಲ್ಲಿ 2 ಸಾವಿರ ಸಸಿಗಳನ್ನು ಬೆಳೆಸುವ ಗುರಿ ಇದೆ’ ಎಂದು ತಿಳಿಸಿದರು.

ADVERTISEMENT

ಬಾಗಲಕೋಟೆ ಪಿಎಸ್ಐ ರಾಘವೇಂದ್ರ ಗುರ್ಲ, ನಿಸರ್ಗ ಬಳಗದ ಕಾರ್ಯದರ್ಶಿ ಎಸ್.ಎಂ. ಭಂಡಾರಿ ಮತ್ತು ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.