ADVERTISEMENT

ತೇರದಾಳ: ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 6:00 IST
Last Updated 28 ಡಿಸೆಂಬರ್ 2025, 6:00 IST
ತೇರದಾಳದ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಜರುಗಿದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕೊನೆಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು
ತೇರದಾಳದ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಜರುಗಿದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕೊನೆಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು   

ತೇರದಾಳ: ಇಲ್ಲಿನ ಎಸ್.ಡಿ.ಎಂ. ಟ್ರಸ್ಟ್‌ನ ದಾನಿಗೊಂಡ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಶನಿವಾರ ಜರುಗಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಶಿಂಗು ಶಿವಕುಮಾರ ಮಾತನಾಡಿದರು.

ವೈದ್ಯರನ್ನು ದೇವರೆಂದು ಗೌರವಿಸುವ ನಾವು ಅವರ ಪ್ರತಿ ವೈದ್ಯಕೀಯ ಕೆಲಸಕ್ಕೂ ಹತ್ತಿರವಿದ್ದು ಸಹಕರಿಸುವ ಮೂಲಕ ಅವರಿಗೆ ಗೌರವ ಸಲ್ಲಿಕೆಯಾಗುವಂತೆ ಪ್ಯಾರಾಮೆಡಿಕಲ್ ವಿಭಾಗದವರು ಮಾಡುತ್ತಾರೆ. ಹಾಗಾಗಿ ಇವರನ್ನು ವೈದ್ಯರಷ್ಟೇ ಗೌರವಿಸುವ ಪದ್ಧತಿ ಜಾರಿಯಾಗಲಿ. ವೈದ್ಯಕೀಯ ಕ್ಷೇತ್ರ ಮಾತ್ರವಲ್ಲದೆ ವಿವಿಧ ವಿಭಾಗಗಳಲ್ಲಿ ಶಿಕ್ಷಣ ಮುಂದುವರೆಸಲು ವಿಜ್ಞಾನ ವಿಭಾಗ ಆಯ್ಕೆ ಮಾಡಿಕೊಳ್ಳಬೇಕು ಎಂದರು.

ADVERTISEMENT

ಸಂಸ್ಥೆಯ ಚೇರ್ಮನ್ ಡಾ.ಎಂ.ಎಸ್.ದಾನಿಗೊಂಡ, ವ್ಯವಸ್ಥಾಪಕ ನಿರ್ದೇಶಕ ಡಾ.ಪುಷ್ಪದಂತ ದಾನಿಗೊಂಡ, ನಿರ್ದೇಶಕರಾದ ಡಾ. ಮಧುರಾ ಪಿ. ದಾನಿಗೊಂಡ, ಕಾಲೇಜಿನ ಪ್ರಾಚಾರ್ಯ ಡಾ. ಬಿ.ಬಿ ಉಗಾರೆ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.