ಹುನಗುಂದ: ಪದವಿ ಹಂತದ ವಿದ್ಯಾರ್ಥಿಗಳಿಗೆ ಶ್ರಮ, ಗೌರವದ ಪರಿಕಲ್ಪನೆ ಇರಬೇಕು ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಗಾಗಿ ತಾಲ್ಲೂಕಿನ ಹಾವರಗಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಏಳು ದಿನಗಳ ಕಾಲ ನಡೆಯುವ ಈ ಶಿಬಿರದ ಯಶಸ್ವಿಗೆ ಗ್ರಾಮಸ್ಥರ ಸಹಕಾರವನ್ನು ಅವರು ಕೋರಿದರು.
ಪ್ರಾಚಾರ್ಯ ಎಚ್.ಎಸ್.ಸುರೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಸಂಸ್ಕೃತಿಯ ಸೊಗಡನ್ನು ಅರಿಯುವಲ್ಲಿ ಶಿಬಿರ ವಿದ್ಯಾರ್ಥಿಗಳಿಗೆ ಪೂರಕವಾಗಿರಲಿದೆ ಎಂದು ಅಭಿಪ್ರಾಯಪಟ್ಟರು.
ಗ್ರಾಮದ ಮುಖಂಡ ಮಹಾಲಿಂಗಪ್ಪ ಕಾಶಪ್ಪನವರ ಎನ್ಎಸ್ಎಸ್ ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ರಾಣಿ ತೋಪಲಕಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ದಾಸರ, ಶಿಕ್ಷಕ ಡಿ.ಜಿ.ಸೊಂಟಿ, ಗ್ರಾಮದ ಮುಖಂಡರಾದ ಪರಪ್ಪ ಗಾಳಿ, ಸಂಗಪ್ಪ ಗಾಳಿ, ಖಾಜಾಸಾಬ್ ಹೊಸಮನಿ, ಗುರುಲಿಂಗಪ್ಪ ಸೊಂಟಿ ಉಪಸ್ಥಿತರಿದ್ದರು. ಶಿಬಿರದ ಆಯೋಜಕ ಬಿ. ವೈ. ಆಲೂರು ಸ್ವಾಗತಿಸಿದರು. ಶ್ರೀದೇವಿ ಕಡಿವಾಲ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.