ADVERTISEMENT

ಗೋವನಕೊಪ್ಪ: ಮಲಪ್ರಭೆಯ ಸೆಳವಿಗೆ ಸಿಲುಕಿ ಕೊಚ್ಚಿಹೋದ ರೈತ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 9:46 IST
Last Updated 11 ಅಕ್ಟೋಬರ್ 2020, 9:46 IST
ಘಟನೆ ನಡೆದ ಸ್ಥಳಕ್ಕೆ ಬಾದಾಮಿ ತಹಶೀಲ್ದಾರ್‌ ಸುಹಾಸ ಇಂಗಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ನಡೆದ ಸ್ಥಳಕ್ಕೆ ಬಾದಾಮಿ ತಹಶೀಲ್ದಾರ್‌ ಸುಹಾಸ ಇಂಗಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   
""

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಗೋವನಕೊಪ್ಪ ಬಳಿ ಭಾನುವಾರ ಹೊಲದಿಂದ ಮರಳಿ ಬರುತ್ತಿದ್ದ ರೈತ ಮಲಪ್ರಭಾ ನದಿಯಲ್ಲಿ ಸೆಳವಿಗೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಕೊಣ್ಣೂರು ಗ್ರಾಮದ ವೆಂಕನಗೌಡ ರಾಮನಗೌಡ ಸಾಲಿಗೌಡರ ಮಲಪ್ರಭೆಯ ಪಾಲಾದವರು.

ಮುಂಜಾನೆ ಕೊಣ್ಣೂರು-ನರಗುಂದ ಹಳೆಯ ಸೇತುವೆ ದಾಟಿಕೊಂಡು ಹೊಲಕ್ಕೆ ಹೋಗಿದ್ದ ಅವರು ವಾಪಸ್ ಅದೇ ದಾರಿಯಲ್ಲಿ ಮನೆಗೆ ಹೊರಟಿದ್ದಾರೆ. ಆದರೆ ಮಳೆಯ ಕಾರಣ ಮಲಪ್ರಭೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಳೆಯ ಸೇತುವೆ ಮೇಲಿನಿಂದ ಹರಿಯುತ್ತಿದೆ. ನೀರಿನ ಸೆಳವಿಗೆ ಸಿಲುಕಿ ಅವರು ಕೊಚ್ಚಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಬಾದಾಮಿ ತಹಶೀಲ್ದಾರ ಸುಹಾಸ ಇಂಗಳೆ ಭೇಟಿ ನೀಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಬೋಟ್ ಬಳಸಿ ಕೊಚ್ಚಿ ಹೋದ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಬಾದಾಮಿ ತಹಶೀಲ್ದಾರ್‌ ಸುಹಾಸ ಇಂಗಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.