ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಂಟಕ್ಕೆ ಹೆಚ್ಚಳಗೊಂಡಿದೆ. ಗುರುವಾರ ಹೊಸದಾಗಿ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಇದು ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದೆ.
165ನೇ ಪ್ರಕರಣದಮಹಿಳೆಯ ನಾಲ್ಕು ವರ್ಷದ ಮಗ, ಮೈದುನನ 13 ವರ್ಷದ ಮಗ ಹಾಗೂ 9 ವರ್ಷದ ಮಗಳಿಗೆ ಸೋಂಕು ದೃಢಪಟ್ಟಿದೆ.
ಬಾಗಲಕೋಟೆಯಲ್ಲಿ ಸೋಂಕಿನಿಂದ ಮೃತಪಟ್ಟ 75 ವರ್ಷದ ವೃದ್ಧನ ಪಕ್ಕದ ಮನೆಯವರಾದ ಇವರು ಮೂಲತಃ ಗುಜರಾತ್ ರಾಜ್ಯದವರು. ನಗರದಲ್ಲಿಯೇ ನೆಲೆಸಿದ್ದಾರೆ. ವೃದ್ಧನ ಕುಟುಂಬದೊಂದಿಗೆ ಸಂಪರ್ಕ ಇದ್ದ ಕಾರಣ ಮಹಿಳೆಗೆ ತಗುಲಿತ್ತು.
ಮಹಿಳೆಯ ಪತಿ, ಮೈದುನ ಹಾಗೂ ಅವರ ಹೆಂಡತಿಯ ತಪಾಸಣೆಯನ್ನೂ ನಡೆಸಲಾಗಿತ್ತು. ಅವರ ಪರೀಕ್ಷಾ ವರದಿಗಳು ನೆಗೆಟಿವ್ ಬಂದಿವೆ.
ಮೂವರು ಮಕ್ಕಳಲ್ಲಿ ಮೇಲ್ನೋಟಕ್ಕೆ ಸೋಂಕಿನ ಯಾವುದೇ ಲಕ್ಷಣ ಇಲ್ಲ. ಐಸೊಲೇಶನ್ ವಾರ್ಡ್ ನಲ್ಲಿ ಇಟ್ಟು ಚಿಕಿತ್ಸೆ ಆರಂಭಿಸಿದ್ದೇವೆ ಎಂದು ಜಿಲ್ಲಾ ಆಸ್ಪತ್ರೆ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.