
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಂಬಾಕು ಮಾರಾಟ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿರುವ ಅಧಿಕಾರಿಗಳು, 25 ಪ್ರಕರಣಗಳನ್ನು ದಾಖಲಿಸಿ ₹6,500 ದಂಡ ವಿಧಿಸಿದ್ದಾರೆ.
ಅಂಗಡಿಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ದೂಮಪಾನ ನಿಷೇಧ ಫಲಕ ಅಳವಡಿಸಬೇಕು. ತಂಬಾಕು ಮಾರಾಟ ಪರವಾನಗಿ ಹೊಂದಿರಬೇಕು. ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಗೋಡೆ ಬರಹ, ಹೋರ್ಡಿಂಗ್ಸ್, ದೃಶ್ಯ ಮತ್ತು ಮುದ್ರಣ ಮಾಧ್ಯಮಗಳ ಮೂಲಕ ಮಾಡಬಾರದು ಎಂದು ತಿಳಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ದಯಾನಂದ ಕರೆಣವರ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಠಳ್ಳಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಬಸವರಾಜ ಹೊಸಳ್ಳಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.