
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಜಿಲ್ಲೆಯ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಇತ್ತೀಚೆಗೆ ನಡೆದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತರಾಗಿ ಮೂರು ಪ್ರಕರಣ ದಾಖಲಿಸಿದ್ದರು. ವಿಡಿಯೊ ಆಧರಿಸಿ 10 ಜನರ ವಿಚಾರಣೆ ನಡೆಸಲಾಗುತ್ತಿದೆ.
‘ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳ ಒತ್ತಡಕ್ಕೆ ಮಣಿದು ಕೆಲ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣವನ್ನೂ ದಾಖಲಿಸಿದ್ದಾರೆ. ಬಂಧಿಸುವುದಾದರೆ ಎಲ್ಲರನ್ನೂ ಬಂಧಿಸಲಿ. ಜೈಲ್ ಭರೊ ಚಳವಳಿ ಮಾಡುತ್ತೇವೆ’ ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಬಸವಂತ ಕಾಂಬಳೆ ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.