ಜಮಖಂಡಿ: ಪಂಚಮಸಾಲಿಗರಿಗೆ ಪ್ರವರ್ಗ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಡಿ.10ರಂದು ಬೆಳಗಾವಿಯಲ್ಲಿ ನಡೆಯುವ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ ತಾಲ್ಲೂಕಿನಿಂದ ಎರಡು ಸಾವಿರಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದು ಪಂಚಮಸಾಲಿ ತಾಲ್ಲೂಕು ಘಟಕದ ಅಧ್ಯಕ್ಷ ಮಹಾದೇವ ಇಟ್ಟಿ ತಿಳಿಸಿದ್ದಾರೆ.
ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೊಂಡಸಕೊಪ್ಪದ ಬಳಿ ಬೃಹತ್ ಸಮಾವೇಶ ಮಾಡಿ ಸರ್ಕಾರಕ್ಕೆ ಮೀಸಲಾತಿ ನೀಡಲು ಒತ್ತಾಯಿಸಲಾಗುವುದು. ಕಾಂಗ್ರೆಸ್, ಬಿಜೆಪಿ ಶಾಸಕರು, ಸಚಿವರು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಲ್ಲಿಂದ ಬೆಳಗಾವಿ ಸುವರ್ಣ ಸೌಧದವರೆಗೆ ಐದು ಸಾವಿರಕ್ಕೂ ಅಧಿಕ ಟ್ರ್ಯಾಕ್ಟರ್ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.