ADVERTISEMENT

ಬಾಗಲಕೋಟೆ: ಫೆ.20ಕ್ಕೆ ಕಲ್ಲಂಗಡಿ, ಕರಬೂಜ ಬೆಳೆ ಕುರಿತು ತರಬೇತಿ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2025, 15:59 IST
Last Updated 17 ಫೆಬ್ರುವರಿ 2025, 15:59 IST

ಬಾಗಲಕೋಟೆ: ನಗರದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಫೆ.20 ರಂದು ಬೆಳಿಗ್ಗೆ 10ಕ್ಕೆ ರೈತ ವಿಕಾಸ ಭವನದಲ್ಲಿ ಕಲ್ಲಂಗಡಿ, ಕರಬೂಜ ಉತ್ಪಾದನಾ ತಾಂತ್ರಿಕತೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.

ಬೇಸಿಗೆ ಕಾಲದಲ್ಲಿ ಎರಡೂ ಬೆಳೆಗಳನ್ನು ರೈತರು ಬೆಳೆಯಲು ಮುಂದಾಗುತ್ತಿರುವ ಹಿನ್ನಲೆಯಲ್ಲಿ ಆ ಬೆಳೆಗಳ ಪೋಷಕಾಂಶಗಳ ನಿರ್ವಹಣೆ, ನೀರು ಬಳಕೆ, ಕೀಟ ರೋಗಗಳ ಸಮಗ್ರ ಹತೋಟಿ ಹಾಗೂ ಮಾರುಕಟ್ಟೆ, ಅವುಗಳ ಮೌಲ್ಯವರ್ಧನೆ ಬಗ್ಗೆ ತರಬೇತಿ ನೀಡಲಾಗುವುದು ಎಂದು ರೈತ ಹಾಗೂ ಸಿಬ್ಬಂದಿ ತರಬೇತಿ ಸಂಸ್ಥೆ ಮುಖ್ಯಸ್ಥ ವಸಂತ ಗಾಣಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT