ADVERTISEMENT

ವಾಹನ ಅಪಘಾತದಲ್ಲಿ ಬಸವರಾಜ ಕಾನಗೊಂಡ ಸಾವಿನ ಪ್ರಕರಣಕ್ಕೆ ತಿರುವು: ನಾಲ್ವರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 4:49 IST
Last Updated 10 ಅಕ್ಟೋಬರ್ 2025, 4:49 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬಾಗಲಕೋಟೆ: ವಾಹನ ಅಪಘಾತದಲ್ಲಿ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಆ ಹಿನ್ನಲೆಯಲ್ಲಿ ಪೊಲೀಸರು ನಾಲ್ವರನ್ನು ವಿಚಾರಣೆ ನಡೆಸಿದ್ದಾರೆ.

ಮಧಬಾವಿ ಬಳಿ ಬುಧವಾರ ಸಂಜೆ ಬೈಕ್‍ನಲ್ಲಿ ತೆರಳುತ್ತಿದ್ದ ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದ ಬಸವರಾಜ್ ಕಾನಗೊಂಡ ಅಪಘಾತದಲ್ಲಿ ಸಾವನ್ನಪ್ಪಿರುವ ಸ್ಥಿತಿಯಲ್ಲಿ ಶವ ಕಂಡು ಬಂದಿತ್ತು. ತನಿಖೆ ಮಾಡಿದಾಗ ವಾಹನ ಡಿಕ್ಕಿ ಹೊಡೆಸಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ADVERTISEMENT

ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡಿರಬಹುದು ಎಂಬ ಸಂಶಯದ ವಿಚಾರಣೆ‌ ತೀವ್ರಗೊಳಿಸಲಾಗಿದೆ. ಅಕ್ರಮ ಅಕ್ಕಿ ಸಾಗಾಟಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರಬಹುದು ಎನ್ನುವುದು ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.