ತೇರದಾಳ: ಸಮೀಪದ ತಮದಡ್ಡಿ ಗ್ರಾಮಕ್ಕೆ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಭೇಟಿ ನೀಡಿ ಸಂತ್ರಸ್ತರ ಸ್ಥಳಾಂತರದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ತಮದಡ್ಡಿಯ ಜನರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಕೊಡಲಾಗಿದೆ. ಜಾನುವಾರುಗಳಿಗೆ ಮೇವಿನ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ನೋಡಲ್ ಅಧಿಕಾರಿ ಆನಂದ ಕೆಸರಗೊಪ್ಪ ಮಾಹಿತಿ ನೀಡಿದರು.
‘ಹಳಿಂಗಳಿಗೆ ನೀರು ನುಗ್ಗಿದ್ದು, ಅಲ್ಲಿನ 40 ಕುಟುಂಬಗಳ 175 ಸಂತ್ರಸ್ತರನ್ನು ಹಾಗೂ 208 ಜಾನುವಾರುಗಳನ್ನು ಸ್ಥಳಾಂತರಿಸಲಾಗಿದೆ. 15 ಕುಟುಂಬಗಳ 72 ಸಂತ್ರಸ್ತರು ಗ್ರಾಮದ ಮಹಾವೀರ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಉಳಿದವರು ಗ್ರಾಮದ ಸುರಕ್ಷಿತ ಸ್ಥಳದ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ’ ಎಂದು ನೋಡಲ್ ಅಧಿಕಾರಿ ಚೇತನ ಅಬ್ಬಿಗೇರಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.