ತೇರದಾಳ: ರಬಕವಿಯಲ್ಲಿ ಈಚೆಗೆ ಜರುಗಿದ ವಲಯಮಟ್ಟದ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಹನಗಂಡಿಯ ಸರ್ಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಬಾಲಕರ ವಿಭಾಗದಲ್ಲಿ ಕಬಡ್ಡಿ, ಕೊಕೊ ಹಾಗೂ ರಿಲೇ ಪಂದ್ಯಗಳಲ್ಲಿ ಪ್ರಥಮ, ವಾಲಿಬಾಲ್ ಹಾಗೂ ಥ್ರೋ ಬಾಲ್ ಪಂದ್ಯಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವೈಯಕ್ತಿಕ ಆಟಗಳಾದ ಅಡೆತಡೆ ಓಟ, ಉದ್ದ ಜಿಗಿತ, ಎತ್ತರ ಜಿಗಿತದಲ್ಲಿ ಪ್ರಥಮ, ಚಕ್ರ ಎಸೆತ, ಗುಂಡು ಎಸೆತ ಹಾಗೂ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಕೊಕೊ, ರಿಲೇ ಹಾಗೂ ಥ್ರೋಬಾಲ್ ಪಂದ್ಯಗಳಲ್ಲಿ ಪ್ರಥಮ, ಕಬಡ್ಡಿ ದ್ವಿತೀಯ, ಅಡೆತಡೆ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಚಕ್ರ ಎಸೆತ, ಗುಂಡು ಎಸೆತ, 100 ಮೀ. ಓಟ, 200 ಮೀ. ಓಟ, 400 ಮೀ. ಓಟ, 600 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಿಆರ್‌ಪಿ ಪೆಂಡಾರಿ, ಮುಖ್ಯಶಿಕ್ಷಕಿ ಎನ್.ಐ. ಸಂಗಾಪೂರ, ಎಸ್‌ಡಿಎಂಸಿ ಅಧ್ಯಕ್ಷ ದಾವೂದ ಅಲಾಸ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.