ಬಾಗಲಕೋಟೆ: ಜಿಲ್ಲೆಯಲ್ಲಿ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿಎಪಿ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಚಾರ ಆಂದೋಲನಕ್ಕೆ ಬುಧವಾರ ಜಿಲ್ಲಾಧಿಕಾರಿ ಸಂಗಪ್ಪ ಚಾಲನೆ ನೀಡಿದರು.
ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ಇಪ್ಕೋ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನ್ಯಾನೊ ತಂತ್ರಜ್ಞಾನ ಹೆಚ್ಚು ಪ್ರಚಲಿತದಲ್ಲಿದ್ದು, ಕೃಷಿಯಲ್ಲಿ ಅಳವಡಿಸಲಾಗುತ್ತಿದೆ. ಇದರ ಬಳಕೆಯಿಂದ ಮಣ್ಣನ್ನು ರಕ್ಷಿಸಿಕೊಳ್ಳಬಹುದು ಹಾಗೂ ಪರಿಸರ ಸ್ನೇಹಿಯಾಗಿದೆ ಎಂದರು.
ವ್ಯವಸಾಯದಲ್ಲಿ ಯೂರಿಯಾದ ಅತಿಯಾದ ಬಳಕೆಯಿಂದ ಮಣ್ಣಿನ ಆರೋಗ್ಯ, ಬೆಳೆ ಇಳುವರಿ ಮತ್ತು ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಆಗುತ್ತದೆ. ನ್ಯಾನೊ ತಂತ್ರಜ್ಞಾನ ಕೃಷಿಯಲ್ಲಿ ಅಳವಡಿಸಲು ರೈತರು ಮುಂದಾಗಬೇಕಿದೆ ಎಂದು ಹೇಳಿದರು
ಡ್ರೋಣ್ ಮೂಲಕ ನ್ಯಾನೊ ಯೂರಿಯಾ ಸಿಂಪರಣೆ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಉಪಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ಉಪ ನಿರ್ದೇಶಕ ಎಲ್.ಐ.ರೂಡಗಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.