ADVERTISEMENT

ಪಶು ಚಿಕಿತ್ಸಾಲಯದಲ್ಲಿ ಲಸಿಕಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 16:11 IST
Last Updated 27 ಏಪ್ರಿಲ್ 2025, 16:11 IST
ಮಹಾಲಿಂಗಪುರ ಸಮೀಪದ ಚಿಮ್ಮಡ ಗ್ರಾಮದ ಪಶು ಚಿಕಿತ್ಸಾಲಯದಲ್ಲಿ ನಡೆದ ಲಸಿಕಾ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಚಾಲನೆ ನೀಡಿದರು
ಮಹಾಲಿಂಗಪುರ ಸಮೀಪದ ಚಿಮ್ಮಡ ಗ್ರಾಮದ ಪಶು ಚಿಕಿತ್ಸಾಲಯದಲ್ಲಿ ನಡೆದ ಲಸಿಕಾ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಚಾಲನೆ ನೀಡಿದರು   

ಮಹಾಲಿಂಗಪುರ: ಸಮೀಪದ ಚಿಮ್ಮಡ ಗ್ರಾಮದ ಪಶು ಚಿಕಿತ್ಸಾಲಯದಲ್ಲಿ ಏಳನೇ ಸುತ್ತಿನ ಕಾಲು ಮತ್ತು ಬಾಯಿ ರೋಗಗಳಿಗೆ ವಿಶೇಷ ಚಿಕಿತ್ಸೆ ನೀಡುವ ಲಸಿಕಾ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಲಾಯಿತು.

ವೈದ್ಯಾಧಿಕಾರಿ ರೂಪಾ ಕಡಸಾನಿ ಮಾತನಾಡಿ, ‘ಜೂನ್ 6 ರವರೆಗೆ ಸತತವಾಗಿ ನಡೆಯಲಿರುವ ಈ ಲಸಿಕಾ ಅಭಿಯಾನದಲ್ಲಿ ಚಿಮ್ಮಡ ಹಾಗೂ ಯರಗಟ್ಟಿ ಗ್ರಾಮಗಳ ಅಂದಾಜು 6500 ಜಾನುವಾರುಗಳಿಗೆ ಕಾಲು ಮತ್ತು ಬಾಯಿ ರೋಗನಿರೋಧಕ ಲಸಿಕೆ ನೀಡುವ ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ರೈತರು, ಸಾರ್ವಜನಿಕರು ತಮ್ಮ ಸಾಕುಪ್ರಾಣಿ ಹಾಗೂ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿ ಕಾರ್ಯಕ್ರಮದ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಆನಂದ ಕವಟಿ, ಪ್ರಭು ಮುಧೋಳ, ಬಾಳು ಬ್ಯಾಕೋಡ, ಸುರೇಶ ಪೂಜಾರಿ, ತುಕಾರಾಮ ದೊಡಮನಿ, ಪಶುವೈದ್ಯ ಪರೀಕ್ಷಕ ಎಸ್.ಕೆ.ಕೋರಿ, ಉಮೇಶ ಸವದಿ, ಪಶು ಸಖಿ ಸುನಿತಾ ಕೋಳಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.