ಗುಳೇದಗುಡ್ಡ: ಮಹರ್ಷಿ ವಾಲ್ಮೀಕಿ ಮಹಾಕಾವ್ಯ ರಾಮಾಯಣ ಬರೆಯುವ ಮೂಲಕ ಹಲವು ಚಿಂತನೆಗಳನ್ನು ಮುಂದಿಟ್ಟಿದ್ದಾರೆ. ಅವರು ಹೇಳಿದ ಆದರ್ಶ ಅನುಕರಣೀಯ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಅವರು ಮಂಗಳವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಇವುಗಳ ಸಹಯೋಗದಲ್ಲಿ ಪಟ್ಟಣದ ಹೊಸ ಅಂಭಾಭವಾನಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದರು.
ಆರಂಭದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ಸಿ ಮತ್ತು ಎಸ್ಟಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಸನ್ಮಾನಿಸಿದರು.
ಅತಿಥಿ ಉಪನ್ಯಾಸಕರಾಗಿ ಬಾದಾಮಿಯ ಭಾಗ್ಯಶ್ರೀ ಮರಡಿತೋಟ ಮಾತನಾಡಿದರು. ವೇದಿಕೆ ಮೇಲೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ, ಪಿಎಸ್ ಐ ಸಿದ್ದಪ್ಪ ಯಡಹಳ್ಳಿ, ಪುರಸಭೆ ಉಪಾಧ್ಯಕ್ಷ ರಾಜಶೇಖರ ಹೆಬ್ಬಳ್ಳಿ, ಪುರಸಭೆ ಮಾಜಿ ಅಧ್ಯಕ್ಷ ವೈ.ಆರ್.ಹೆಬ್ಬಳ್ಳಿ, ಸಮಾಜದ ಅಧ್ಯಕ್ಷ ಫಕೀರಪ್ಪ ತಳವಾರ, ಮುಖಂಡರಾದ ರಾಮಣ್ಣ ಚಂದರಗಿ, ಪ್ರಕಾಶ ಬೀಳಗಿ, ಯಲ್ಲಪ್ಪ ಮನ್ನಿಕಟ್ಟಿ, ಗೋಪಾಲ ಉಂಡಿಗೇರ, ಬಾಲು ಹೊಸಮನಿ, ಶೇಖರ ಗೌಡ್ರ, ಕಲ್ಲನಗೌಡ ಗೌಡ್ರ, ಶಿವಪ್ಪ ಸಂಗೊಂದಿ ಶಿವು ಗೋತಗಿ, ಶಿವು ವಾಲೀಕಾರ ಸಂಜಯ ಮಬ್ರುಮಕರ ಇದ್ದರು.
ಮೆರವಣಿಗೆ : ಮಧ್ಯಾಹ್ಮ 12 ಗಂಟೆಗೆ ತಹಶೀಲ್ದಾರ್ ಕಚೇರಿಯಿಂದ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯುವ ಸ್ಥಳಕ್ಕೆ ಬಂದು ತಲುಪಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.