ADVERTISEMENT

ಪಂಚಮಸಾಲಿ ಮೂರನೇ ಪೀಠದ ಪಟ್ಟಾಧಿಕಾರಕ್ಕೆ ಕ್ಷಣಗಣನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2022, 2:56 IST
Last Updated 13 ಫೆಬ್ರುವರಿ 2022, 2:56 IST
ಸಿದ್ಧತೆ ಪರಿಶೀಲಿಸಿದ ಸಚಿವ ಮುರುಗೇಶ ನಿರಾಣಿ
ಸಿದ್ಧತೆ ಪರಿಶೀಲಿಸಿದ ಸಚಿವ ಮುರುಗೇಶ ನಿರಾಣಿ   

ಬಾಗಲಕೋಟೆ: ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ 3ನೇ ಪೀಠಕ್ಕೆ ಜಮಖಂಡಿ ತಾಲ್ಲೂಕಿನ ಆಲಗೂರಿನಲ್ಲಿ ಭಾನುವಾರ ವಿಧ್ಯುಕ್ತ ಚಾಲನೆ ದೊರೆಯಲಿದೆ.

ನಸುಕಿನಲ್ಲಿ ನಡೆಯುವ ಪಟ್ಟಾಧಿಕಾರ ಮಹೋತ್ಸವದಲ್ಲಿ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಮೂರನೇ ಪೀಠದ ಪ್ರಥಮ ಜಗದ್ಗುರು ಆಗಿ ಪೀಠಾರೋಹಣ ಮಾಡಲಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ ಈಗ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮ ಹಾಗೂ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಗುರುಪೀಠಗಳು ಇವೆ.

ADVERTISEMENT

ಆಲಗೂರಿನಲ್ಲಿ ನಡೆಯುವ ಮೂರನೇ ಪೀಠದ ಶ್ರೀಗಳ ಪಟ್ಟಾಧಿಕಾರದ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಈಗಾಗಲೇಹರಿಹರ ಪೀಠದ ವಚನಾನಂದ ಸ್ವಾಮೀಜಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂದಿದ್ದಾರೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಶನಿವಾರ ರಾತ್ರಿ ಆಲಗೂರಿನಲ್ಲಿ ಅಂತಿಮ ಕ್ಷಣದ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಶ್ರೀಗಳು ಹಾಜರಿದ್ದರು.

ಪಟ್ಟಾಧಿಕಾರ ಸಮಾರಂಭದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಸಚಿವ ಮುರುಗೇಶ ನಿರಾಣಿ ಸಹೋದರ ಸಂಗಮೇಶ ನಿರಾಣಿ ನೇತೃತ್ವದಲ್ಲಿ ಸಮಾರಂಭಕ್ಕೆ ಭರದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಬೃಹತ್ ವೇದಿಕೆ ಸಿದ್ಧಪಡಿಸಿದ್ದು, ಪೆಂಡಾಲ್ ವ್ಯವಸ್ಥೆ ಮಾಡಲಾಗಿದೆ.ಒಂದು ಲಕ್ಷ ಜನರಿಗೆ ಆಸನ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.