
ಬಾದಾಮಿ: ‘ಸಮಾಜ ಸೇವೆಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಹೆಗ್ಗಡೆ ಅವರ ಸಮಾಜ ಸೇವೆ ಶ್ಲಾಘನೀಯ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಬಿ ಹಂಗರಗಿ ಹೇಳಿದರು.
ತಾಲ್ಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ವೀರೇಂದ್ರ ಹೆಗ್ಗಡೆ ಜನ್ಮದಿನ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವೀರಪುಲಿಕೇಶಿ ಆಯುರ್ವೇದ ವಿದ್ಯಾಲಯ ಮತ್ತು ಸಾಯಿ ದೀಪ ಕಣ್ಣಿನ ಆಸ್ಪತ್ರೆ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ ಸಮಾರಂಭಕ್ಕೆ ಅವರು ಚಾಲನೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಘಟಕದ ಯೋಜನಾಧಿಕಾರಿ ನಾಗರಾಜ ಹದ್ಲಿ, ವೀರಪುಲಿಕೇಶಿ ಆಯುರ್ವೇದ ಕಾಲೇಜಿನ ಡಾ. ಜಯಾ ಮಳಗೌಡರ, ಬೆಳಗಾವಿ ಸಾಯಿದೀಪ ಕಣ್ಣಿನ ಆಸ್ಪತ್ರೆಯ ಡಾ. ಚನ್ನು ಕಂಬಳಿಮಠ ಮಾತನಾಡಿದರು.
ವೈದ್ಯರು ಮತ್ತು ಸಿಬ್ಬಂದಿ 200ಕ್ಕೂ ಅಧಿಕ ಜನರ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಮಾಡಿದರು.
ವಲಯ ಮೇಲ್ವಿಚಾರಕ ಈಶ್ವರ ದೇಸಾಯಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರತ್ನಾ, ವಲಯದ ಸೇವಾ ಪ್ರತಿನಿಧಿಗಳು ಮತ್ತು ಗ್ರಾಮದ ಗಣ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.