
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ‘ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸಿ.ಎಂ ಆಗುವುದಿಲ್ಲ ಎನ್ನುವುದು ಅಷ್ಟೇ ಸತ್ಯ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
‘ತಂದೆ–ಮಕ್ಕಳು ಇಬ್ಬರೂ ನಾಟಕ ಮಾಡುತ್ತಾರೆ. ದಾವಣಗೆರೆ, ಕಲಬುರಗಿ, ಬೀದರ್ ಮುಂತಾದೆಡೆ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸೋಲಲು ಅವರೇ ಕಾರಣ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ವಿರೋಧಿಸಿ ಪಾದಯಾತ್ರೆ ಮಾಡುತ್ತೇವೆ ಎಂದರೆ ಅವಕಾಶ ನೀಡಲಿಲ್ಲ. ಅಧಿವೇಶನದಲ್ಲಿಯೂ ವಿಜಯೇಂದ್ರ ಸರ್ಕಾರದ ವಿರುದ್ಧ ಮಾತನಾಡಿದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಿಮ್ಮ ಫೈಲ್ ತೆಗೆಯುತ್ತೇವೆ ಎಂದರೆ ಸುಮ್ಮನಾಗುತ್ತಾರೆ’ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.