ಬಾಗಲಕೋಟೆ: ಜಿಲ್ಲೆಯ ಕೂಡಲಸಂಗಮದಲ್ಲಿ ಜರುಗಿದ ಬೇಡಜಂಗಮ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟದ ಸಭೆಯಲ್ಲಿ ಬಾಗಲಕೋಟೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವೀರೇಶ ಹಿರೇಮಠ, ಗೌರವಾಧ್ಯಕ್ಷರಾಗಿ ಡಾ. ಸುರೇಶ ವಸ್ತ್ರದ, ಉಪಾಧ್ಯಕ್ಷರಾಗಿ ರುದ್ರಯ್ಯ ಕಂಠಿಮಠ, ಪ್ರಧಾನ ಕಾರ್ಯದರ್ಶಿಯಾಗಿ ಸಂಗಯ್ಯ ವೀರಕ್ತಮಠ ಅವರನ್ನು ಆಯ್ಕೆ ಮಾಡಲಾಗಿದೆ.
ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಭೃಂಗೀಮಠ, ದಾನಯ್ಯ ಹಿರೇಮಠ, ವೀರೇಶ ಕೂಡಲಗಿಮಠ ರವರು ಕಾರ್ಯಕ್ರಮದಲ್ಲಿ ಆಯ್ಕೆ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.