ADVERTISEMENT

ಸಮುದಾಯಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರ: ಶಾಸಕ ಚಿಮ್ಮನಕಟ್ಟಿ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 4:12 IST
Last Updated 29 ಡಿಸೆಂಬರ್ 2025, 4:12 IST
ಗುಳೇದಗುಡ್ಡದ ಗುರುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ  ಅವರಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನಾಚರಣೆ ಅಂಗವಾಗಿ ಜರುಗಿದ ತಾಲ್ಲೂಕು ಮಟ್ಟದ ಸಮಾವೇಶದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. 
ಗುಳೇದಗುಡ್ಡದ ಗುರುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ  ಅವರಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನಾಚರಣೆ ಅಂಗವಾಗಿ ಜರುಗಿದ ತಾಲ್ಲೂಕು ಮಟ್ಟದ ಸಮಾವೇಶದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.    

ಗುಳೇದಗುಡ್ಡ: ವಿಶ್ವಕರ್ಮ ಸಮಾಜದ ಪ್ರತಿಯೊಬ್ಬರೂ ತಮ್ಮ ಮೂಲ ಕಸಬು ಶಿಲ್ಪಕಲೆಯನ್ನು ಕಲಿಸುವುದರ ಜೊತೆಗೆ ಬಡಿಗೆತನ ಮೂರ್ತಿಶಿಲ್ಪ ಮುಂತಾದ ಕೌಶಲ್ಯಭರಿತ ಕಾರ್ಯದಿಂದ ಸಮುದಾಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಅವರು ಭಾನುವಾರ ಪಟ್ಟಣದ ಗುರುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜ ತಾಲ್ಲೂಕು ಘಟಕ, ಅನ್ನಪೂಣೇಶ್ವರಿ ಮಹಿಳಾ ಮಂಡಳ ಇವುಗಳ ಸಹಯೋಗದಲ್ಲಿ ಅಮರಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿಶ್ವಕರ್ಮ ಸಮಾಜದ ಜಾಗೃತಿ ಸಮಾವೇಶದಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ವಿಶ್ವಕರ್ಮ ಸಮಾಜದ ಮೂರ್ತಿ, ರಥ ಶಿಲ್ಪಿಗಳು ಹಾಗೂ ಇನ್ನಿತರೇ ಸಾಧಕರಿಗೆ ಇಂತಹ ವೇದಿಕೆಗಲ್ಲಿ ಗೌರವಿಸುವ ಸಂಪ್ರದಾಯ ಬೆಳೆಯಬೇಕು. ಶಿವಯೋಗ ಮಂದಿರದ ಇತಿಹಾಸ ಪ್ರಸಿದ್ಧ ರಥ ನಿರ್ಮಾಣ ಕಾರ್ಯ ಮಾಡಿದ ಬಸವರಾಜ ಬಡಿಗೇರ ಅಂಥವರ ಸೇವೆ ಸ್ಮರಣೀಯ ಎಂದರು.

ADVERTISEMENT

ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಮೂರ್ತಿಗೆ ಪುಷ್ಪಾರ್ಚಣೆ ಮಾಡಿ ಮಾತನಾಡಿ, ವಿಶ್ವಕರ್ಮ ಸಮಾಜದ ಉಪಪಂಗಡಗಳು ಸಂಘಟಿತರಾಗಬೇಕು. ಈ ಸಮುದಾಯದ ಉದ್ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಬೇಡಿಕೆ ಇದೆ ಎಂದರು.

ವಿಶ್ವಕರ್ಮ ಸಮಾಜದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವಸಂತ ಮುರಳಿ ಆಚಾರ್ಯ ಮಾತನಾಡಿದರು. ಗುರುಸಿದ್ದೇಶ್ವರ ಮಠದ ಬಸವರಾಜ ಶ್ರೀಗಳು ಸಾನಿಧ್ಯವಹಿಸಿ ಮಾತನಾಡಿದರು. ಅಖಂಡೇಶ್ವರ ಪತ್ತಾರ ಪ್ರಾಸ್ತವಿಕವಾಗಿ ಮಾತನಾಡಿದರು. ವಿಶ್ವಕರ್ಮ ಸಮುದಾಯದ ಬಗ್ಗೆ ಉಪನ್ಯಾಸಕಿ ಭುವನೆಶ್ವರಿ ಬಡಿಗೇರ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಥಶಿಲ್ಪಿ ಬಸವರಾಜ ಬಡಿಗೇರ ಸೇರಿದಂತೆ ಹಲವು ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು.

ವೇದಿಕೆ ಮೇಲೆ ಬಾಗಲಕೋಟೆಯ ಮಳಿಯಪ್ಪಯ್ಯಸ್ವಾಮಿ ಮಹಾಪುರುಷರು, ಸಿಂದಗಿಯ ರಾಮಚಂದ್ರ ಶ್ರೀಗಳು, ಗದ್ದನಕೇರಿಯ ಭಾಸ್ಕರಸ್ವಾಮಿ ಮಹಾಪುರುಷರು, ಮುರನಾಳದ ಜಗನ್ನಾಥಸ್ವಾಮಿ ಮಹಾಪುರುಷರು, ಶಿರೂರಿನ ರಾಜೇಂದ್ರ ಶ್ರೀಗಳು, ಹೊನಗನಹಳ್ಳಿಯ ಸಂಗಪ್ಪಜ್ಜ ಶರಣರು ಸಾನಿಧ್ಯವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಮಹೇಶ ಬಿಜಾಪೂರ, ಪ್ರಮೋದ ಕವಡಿಮಟ್ಟಿ, ಸಮಾಜದ ಜಿಲ್ಲಾಧ್ಯಕ್ಷ ಹನಮಂತ ಪತ್ತಾರ, ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಬಡಿಗೇರ, ಮಾನಪ್ಪ ಬಡಿಗೇರ ಇದ್ದರು.

ಗುಳೇದಗುಡ್ಡದ ಗುರುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ  ಅವರಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನಾಚರಣೆ ಅಂಗವಾಗಿ ಜರುಗಿದ ತಾಲ್ಲೂಕು ಮಟ್ಟದ ಸಮಾವೇಶದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.