ಕಲಾದಗಿ: ದೇಶದ ಸಂಸ್ಕೃತಿಯನ್ನು ಪ್ರಪಂಚಕ್ಕೆ ಸಾರಿದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರು ಎಂದು ಗುರುಲಿಂಗೇಶ್ವರ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್.ವಿ. ಲಮಾಣಿ ಹೇಳಿದರು.
ಗ್ರಾಮದ ಗುರುಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿವೇಕಾನಂದರ ವಿಚಾರಗಳು ಪ್ರಸ್ತುತ ಯುವ ಜನಾಂಗಕ್ಕೆ ಅವಶ್ಯಕವಾಗಿವೆ. ವಿವೇಕಾನಂದರ ಚಿಂತನೆ, ಆದರ್ಶ ಬದುಕು ಇಡೀ ವಿಶ್ವಕ್ಕೆ ದಾರಿದೀಪವಾಗಿದೆ ಎಂದರು.
ಪ್ರೌಢಶಾಲಾ ಸಹ ಶಿಕ್ಷಕ ಎಚ್.ಎನ್. ನಾಯನೇಗಿಲಿ ಮಾತನಾಡಿ, ‘ಸ್ವಾಮಿ ವಿವೇಕಾನಂದರ ತತ್ವಜ್ಞಾನ ಮತ್ತು ಅವರು ಬದುಕಿ ಬೋಧಿಸಿದ ಆದರ್ಶಗಳು ಭಾರತದ ಯುವಜನತೆಯ ದೊಡ್ಡ ಸಂಪನ್ಮೂಲವಾಗಿವೆ’ ಎಂದು ಹೇಳಿದರು.
ಶಿಕ್ಷಕರಾದ ಎಂ.ಆರ್. ಘಾಟೆ, ಎ.ಎಂ. ಅಂಬಿ, ವೈ.ಎಸ್. ಟಕ್ಕಳಕಿ, ಎಸ್.ಎಸ್. ಕಲಾದಗಿ, ಎಂ.ಜಿ. ಕಲ್ಲೋಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.