ತೇರದಾಳ: ಇಲ್ಲಿನ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯ ದಾನಿಗೊಂಡ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ವ್ಯಾಪ್ತಿಯ ಕಲಬುರ್ಗಿ ವಲಯ ಮಟ್ಟದ ಅಂತರ ಕಾಲೇಜು ವಾಲಿಬಾಲ್ ಟೂರ್ನಿಗೆ ಬುಧವಾರ ಚಾಲನೆ ನೀಡಲಾಯಿತು.
ಬೆಳಗಾವಿ ಜಿಲ್ಲೆ ಹಾರೂಗೇರಿಯ ಡಾ. ಸಂಜೀವ್ ಪಾಟೀಲ ಉದ್ಘಾಟಿಸಿದರು. ವಲಯ ವ್ಯಾಪ್ತಿಯ 46 ತಂಡಗಳು ಟೂರ್ನಿಯಲ್ಲಿ ಭಾಗವಹಿಸಿದ್ದವು.
ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಸಂಯೋಜಕ ನಥಾನಿಯಲ್, ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಾ. ಎಂ.ಎಸ್. ದಾನಿಗೊಂಡ, ವ್ಯವಸ್ಥಾಪಕ ನಿರ್ದೇಶಕ ಡಾ. ಪುಷ್ಪದಂತ ದಾನಿಗೊಂಡ, ಆಯುರ್ವೇದಿಕ್ ಮಹಾವಿದ್ಯಾಲಯದ ಡೀನ್ ಡಾ. ಪಿ.ಬಿ. ಅಪರಾಜ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ರಾಮು ಹಾಡಕಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.