ADVERTISEMENT

ಮತದಾನದಿಂದ ಪ್ರಜಾಪ್ರಭುತ್ವ ಬಲಿಷ್ಠ: ಪ್ರಾಚಾರ್ಯ ಅರುಣಕುಮಾರ ಗಾಳಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 4:39 IST
Last Updated 3 ಜನವರಿ 2026, 4:39 IST
ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮತದಾನ ನೋಂದಣಿ ಅಭಿಯಾನದ ದೃಶ್ಯ
ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮತದಾನ ನೋಂದಣಿ ಅಭಿಯಾನದ ದೃಶ್ಯ   

ಬಾಗಲಕೋಟೆ: ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಮತದಾನವು ಅತ್ಯಂತ ಮುಖ್ಯವಾಗಿದ್ದು, ಇದು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ಪ್ರಾಚಾರ್ಯ ಅರುಣಕುಮಾರ ಗಾಳಿ ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಮತದಾನದ ನೋಂದಣಿ ಅಭಿಯಾನಕ್ಕೆ ಪದವಿ ವಿದ್ಯಾರ್ಥಿಗಳಿಗೆ  ಚುನಾವಣೆ ಆಯೋಗದ ನಮೂನೆ-6 ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, 18 ವರ್ಷ ತುಂಬುತ್ತಿದ್ದಂತೆಯೇ ಮತದಾನದ ಹಕ್ಕು ಪಡೆಯಬೇಕು ಎಂದರು.

ಮತದಾನದ ಪಾವಿತ್ರ್ಯ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅವಶ್ಯಕ. ಯುವ ಜನತೆ ಮತದಾನದ ಮಹತ್ವವನ್ನು ಅರಿತು ನೋಂದಣಿ ಮಾಡಿಸಬೇಕು. ಚುನಾವಣೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವುದಕ್ಕಾಗಿ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವು ಮತದಾನದ ಪ್ರಮಾಣ ಹೆಚ್ಚಿಸಲು, ನಾಗರಿಕರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.